ಕಾಂಗ್ರೆಸ್ ಯುವಕರ ಭವಿಷ್ಯದ ಸರ್ಕಾರ

minister madhu bangarappa
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ಕಾಂಗ್ರೆಸ್ ರಾಜ್ಯದ ಯುವಕರ ಭವಿಷ್ಯದ ಸರ್ಕಾರವಾಗಿದೆ. ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಜನರಿಗೆ ಸರ್ಕಾರದಿಂದ ಯೋಜನೆಗಳು ಸಿಗುತ್ತಿರುವುದೇ ಟೀಕೆ ಟಿಪ್ಪಣಿ ಮಾಡುವವರಿಗೆ ಕೊಡುವ ಉತ್ತರವಾಗಿದೆ. ಈ ಐದು ಯೋಜನೆಗಳಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ನಂತೆ ವಾರ್ಷಿಕವಾಗಿ ಜನರ ಖಾತೆಗೆ 8ರಿಂದ 9 ಕೋಟಿ ರೂ. ನೇರವಾಗಿ ನೀಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜನರು ಕಷ್ಟದಲ್ಲಿದ್ದಾಗ ಸ್ಪಂದಿಸುವುದು ಸರ್ಕಾರ ಕರ್ತವ್ಯವಾಗಿದೆ. ಫೆಬ್ರವರಿಯಲ್ಲಿ ಮುಂದಿನ ಬಜೆಟ್ ನಡೆಯುವ ಸಾಧ್ಯತೆ ಇದ್ದು ಐದು ಗ್ಯಾರಂಟಿಗಳ ಈಡೇರಿಕೆ ಬಳಿಕ ಇನ್ಮುಂದೆ ರಸ್ತೆ, ಸಮುದಾಯ ಭವನ ಸೇರಿದಂತೆ ಮೂಲಸೌಕರ್ಯಗಳಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಶಿವಮೊಗ್ಗ, ದಾವಣಗರೆ, ಚಿಕ್ಕಮಗಳೂರು, ಚಿತ್ರದುರ್ಗ, ಉತ್ತರ ಕನ್ನಡ ಒಳಗೊಂಡಂತೆ ರಾಜ್ಯದ ಮೂಲೆ ಮೂಲೆಯಿಂದಲೇ ಶಿವಮೊಗ್ಗದ ಫ್ರೀಡಂಪಾರ್ಕ್‌ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸರ್ಕಾರದ ದೊಡ್ಡಮಟ್ಟದ ಕಾರ್ಯಕ್ರಮ ಇದಾಗಿದ್ದು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ, ಡಿಸಿಎಂ ಸೇರಿ ಅನೇಕ ಸಚಿವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net