

ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆಯುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಜನರು ಕಾಂಗ್ರೆಸ್ ಮೇಲಿನ ವಿಶ್ವಾಸ ಕಳೆದುಕೊಂಡಿದ್ದು, ಕಾಂಗ್ರೆಸ್‌ನವರೆ ಮೋದಿ ಮೋದಿ ಎನ್ನುತ್ತಿದ್ದಾರೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಸ್ಥಳೀಯ ಅತ್ತನೂರು ಂಕ್ಷನ್ ಹಾಲ್‌ನಲ್ಲಿ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಮುಂಚೆ ಗುರುವಾರ ಏರ್ಪಡಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ, ಸಿದ್ದರಾಮಯ್ಯ ಮೈಸೂರು ಗೆದ್ದು ಸಿಎಂ ಸ್ಥಾನ ಉಳಿಸಿಕೊಂಡ್ರೆ ಸಾಕು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ತಮ್ಮ ಸುರೇಶ ಗೆದ್ದರೆ ಸಾಕು ಎನ್ನುತ್ತಿದ್ದಾರೆ ಎಂದರು.
ಇದು ಪಕ್ಷಕ್ಕಾಗಿ ನಡೆಯುತ್ತಿರುವ ಚುನಾವಣೆಯಲ್ಲ. ದೇಶಕ್ಕೆ ನಡೆಯುತ್ತಿರುವ ಚುನಾವಣೆಯಾಗಿದೆ. ಸಚಿವರೊಬ್ಬರು ಮೋದಿ ಎಂದವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಅವರ ತಿರುಗಿ ಕಪಾಳಕ್ಕೆ ಹೊಡೆಯೋಣ ಎಂದು ಹೇಳಿದರು.
ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದರೋಡೆ ಮಾಡುತ್ತಿದ್ದಾರೆ. ಕಾಂಗ್ರೆಸ್ ದಲಿತರನ್ನು ಜೀತಕ್ಕೆ ಇಟ್ಟುಕೊಂಡಿದೆ. ಕಾಂಗ್ರೆಸ್‌ಗೆ ಜೋತು ಬಿದ್ದಿದ್ದ ಎಸ್ಸಿ, ಎಸ್ಟಿ ಜನರಿಗೆ ಇದೀಗ ಬುದ್ದಿ ಬಂದಿದೆ.
ಕಾಂಗ್ರೆಸ್‌ನಲ್ಲಿ ಪ್ರಧಾನಿ ಹೆಸರು ಘೋಷಣೆಯಿಲ್ಲ. ಕಾಂಗ್ರೆಸ್ ಅಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆಗಬೇಕು ಎನ್ನುತ್ತಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಒಪ್ಪಿಲ್ಲ. ರಾಹುಲ್‌ಗಾಂ ಪ್ರಧಾನಿ ಆಗಬೇಕು ಎನ್ನುತ್ತಿದ್ದಾರೆ. ರಾಹುಲ್ ಗಾಂ ಮಗುವಿದ್ದಂತೆ ಅವರನ್ನು ಮೋದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ನಮ್ಮ ಕರ್ತವ್ಯ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಕಲ್ಪವಾಗಿದೆ. ಕಾಂಗ್ರೆಸ್‌ನ ಗ್ಯಾರಂಟಿಗಳು ಶಾಶ್ವತವಲ್ಲ ಎಂದರು.
ಸಭೆಯಲ್ಲಿ ಮಾಜಿ ಶಾಸಕರಾದ ಕೆ.ಶಿವನಗೌಡ ನಾಯಕ, ವೆಂಕಟರಾವ್ ನಾಡಗೌಡ, ಎ.ಪಾಪಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಗಂಗಾಧರ ನಾಯಕ, ತಿಪ್ಪರಾಜ ಹವಾಲ್ದಾರ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಪಕ್ಷದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ಉಪಸ್ಥಿತರಿದ್ದರು.