ಕಾಂಗ್ರೆಸ್ ಅನ್ಯಾಯ ಮರೆಯದಿರಿ

26Rayabag2
Published on

ರಾಯಬಾಗ: ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ಕೂಡ ಡಾ.ಅಂಬೇಡ್ಕರ್ ಅವರಿಗೆ ಹಾಗೂ ದಲಿತ ಸಮುದಾಯಕ್ಕೆ ಅನ್ಯಾಯ ಮಾಡುತ್ತ ಬಂದಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಹೇಳಿದರು.

ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ವಿಚಾರಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮತ್ತು ನೆಹರು ಕುತಂತ್ರದಿಂದ ಪಾಕಿಸ್ತಾನ ಹುಟ್ಟಿಕೊಂಡಿತು. ಅಂಬೇಡ್ಕರ್ ಅವರು ಮೊದಲೇ ದಲಿತರಿಗೆ ಕಾಂಗ್ರೆಸ್ ಒಂದು ಸುಡುವ ಮನೆ ಎಂದು ಎಚ್ಚರಿಸಿದ್ದಾರೆ.

ಇಂದು ಬಿಜೆಪಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಾ.ಅಂಬೇಡ್ಕರ್ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದಾರೆ. ಕಾಂಗ್ರೆಸ್ ದಲಿತರಿಗೆ ಹಾಗೂ ಅಂಬೇಡ್ಕರ್ ಅವರಿಗೆ ಮಾಡಿದ ಅನ್ಯಾಯವನ್ನು ದಲಿತರು ಮರೆಯಬಾರದು ಎಂದರು. ಬಿಜೆಪಿ ರಾಜ್ಯ ಸದಸ್ಯ ಚಿದಾನಂದ ಚಲವಾದಿ ಪ್ರ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಡಿ.ಎಂ.ಐಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಪೃಥ್ವಿರಾಜ ಜಾಧವ, ರಾಜಶೇಖರ ಖನದಾಳೆ, ಸದಾನಂದ ಹಳಿಂಗಳಿ, ಸದಾಶಿವ ೋರ್ಪಡೆ, ಬಸವರಾಜ ಡೊನವಾಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net