

ಮೈಸೂರು: ಸಿದ್ದರಾಮಯ್ಯ ಅವರೊಂದಿಗೆ ಇಡೀ ಕಾಂಗ್ರೆಸ್ ಇದೆ. ಅವರನ್ನು ತೆಗೆಯಲು ಸಾಧ್ಯವಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನ್ನಿಯಪ್ಪ ಗುಡುಗಿದರು.
ಕ್ಷುಲ್ಲಕ ಕಾರಣಕ್ಕೆ ಜೆಡಿಎಸ್-ಬಿಜೆಪಿ ಪಾದಯಾತ್ರೆ ಮಾಡುತ್ತಿದ್ದು, ಮುಡಾ ವಿಷಯದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿದ್ದಾರೆ. ರಾಜ್ಯಕ್ಕೆ ಬೇಕಿರುವ ಯೋಜನೆಗಳಿಗೆ ಪಾದಯಾತ್ರೆ ಮಾಡಿ, ಕ್ಷುಲ್ಲಕ ಕಾರಣಕ್ಕೆ ಮಾಡಬೇಡಿ ಎಂದರು.
ಸುಭದ್ರ ಸರ್ಕಾರ ಇರಬೇಕೆಂದು ಜನರು 136 ಜನರನ್ನು ಆಯ್ಕೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿರುವ 5 ಗ್ಯಾರಂಟಿ ಯೋಜನೆಗಳು ಶೇ.80 ಜನರಿಗೆ ತಲುಪಿಸಿದ್ದು, ನುಡಿದಂತೆ ನಡೆದಿದ್ದೇವೆ. ಈ ರೀತಿ ಕಾರ್ಯಕ್ರಮ ಭಾರತದಲ್ಲಿ ನೀಡಿರುವುದು ಕರ್ನಾಟಕದಲ್ಲಿ ಮಾತ್ರ ಎಂದರು.