ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

02-04-HNPP 1
ಹೊಳೆನರಸೀಪುರ ತಾಲೂಕಿನ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಎಚ್.ಟಿ.ಲಕ್ಷ್ಮಣ್, ಎಚ್.ವಿ.ಪುಟ್ಟರಾಜು, ಮುಜಾಹಿದ್ ಪಾಷಾ ಇತರರು ಇದ್ದರು.
Published on

ಹೊಳೆನರಸೀಪುರ: ತಾಲೂಕಿನ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾದರು.

ಜೆಡಿಎಸ್ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾರಗೌಡನಹಳ್ಳಿ ಮಲ್ಲೇಶ್, ಅಲ್ಪಸಂಖ್ಯಾತ ಮುಖಂಡ ಸರ್ದಾರ್ ಅಹಮದ್, ನ್ಯಾಮನಹಳ್ಳಿ ಚಂದ್ರು, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಮಾಯಣ್ಣ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ್, ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕ ಮುಜಾಹಿದ್ ಪಾಷಾ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಗೋವಿಂದರಾಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net