

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ವಿಭಾಗಗಳಿಂದ ಫೆ.22ರಂದು ಬೆಳಗ್ಗೆ 11ಕ್ಕೆ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಹೇಳಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ಜೈ ಬಾಪು-ಜೈ ಭೀಮ್-ಜೈ ಸಂವಿಧಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದು, ಇದರ ಮುಂದುವರಿದ ಭಾಗವಾಗಿ ಅಂಬೇಡ್ಕರ್ ತಂದುಕೊಟ್ಟ ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 9ಕ್ಕೆ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಅಲ್ಲಿಂದ ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ನೆಹರು ರಸ್ತೆ, ಟಿ.ಸೀನಪ್ಪ ಶೆಟ್ಟಿ ವೃತ್ತ ಮಾರ್ಗವಾಗಿ ಅಂಬೇಡ್ಕರ್ ಭವನದಲ್ಲಿ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ತೆರಳುವರು. ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು ಎಂದರು.
ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಎಂಎಲ್‌ಸಿ ಬಲ್ಕಿಷ್ ಬಾನು, ವಿವಿಧ ನಿಗಮಗಳ ಅಧ್ಯಕ್ಷರಾದ ಜಿ.ಪಲ್ಲವಿ, ಎಸ್.ರವಿಕುಮಾರ್, ಆರ್.ಎಂ.ಮಂಜುನಾಥ ಗೌಡ, ಸೂಡಾ ಎಚ್.ಎಸ್.ಸುಂದರೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಮುಖಂಡರಾದ ಎಚ್.ಸಿ.ಯೋಗೇಶ್, ಡಾ. ಶ್ರೀನಿವಾಸ್ ಕರಿಯಣ್ಣ, ಗೋಣಿ ಮಾಲತೇಶ್, ನಾಗರಾಜ್ ಗೌಡ ಭಾಗವಹಿಸುವರು. ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ಡಾ. ಕೆ.ಜಿ.ವೆಂಕಟೇಶ್ ಉಪನ್ಯಾಸ ನೀಡುವರು ಎಂದು ಹೇಳಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಒಬಿಸಿ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಶಿವಣ್ಣ, ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ಶ್ರೀಧರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಾಮಿಲ್ ಪಾಷಾ, ಮುಖಂಡರಾದ ಜಿ.ಡಿ.ಮಂಜುನಾಥ, ಹಾಲಪ್ಪ, ಉಮಾಪತಿ, ಶರತ್ ಮರಿಯಪ್ಪ, ಗಣಪತಿ, ರಮೇಶ್ ಸುದ್ದಿಗೋಷ್ಠಿಯಲ್ಲಿದ್ದರು.