ಟ್ರೋಲ್ ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡನಿಂದ ಕೇಸ್

IMG-20240305-WA0068
Published on

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ , ಯತಿಂದ್ರ ಸಿದ್ದರಾಮಯ್ಯ ವಿರುದ್ದ ಇನ್ ಸ್ಟಾಗ್ರಾಮ್ ನಲ್ಲಿ ಅವಹೇಳನ ಹಿನ್ನೆಲೆ ಇಲ್ಲಿನ ಸೆನ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಪ್ರಿಯಾಂಕ್‌ ಖರ್ಗೆ , ಯತಿಂದ್ರ ಸಿದ್ದರಾಮಯ್ಯ ಭಾಷಣದ ತುಣಕಿಗೆ ಅವಹೇಳನಕಾರಿ ಪದ ಬಳಸಿ ಎಡಿಟ್ ಮಾಡಿ, ಗುಲಾಮ್ ಗ್ಯಾಂಗ್ ಎನ್ನುವ ಇನ್ ಸ್ಟಾಗ್ರಾಮ್ ಅಕೌಂಟ್ ನಲ್ಲಿ ವಿಡಿಯೋ ಹರಿಬಿಟ್ಟ ಹಿನ್ನಲೆ.

ಗುಲಾಮ್‌ ಗ್ಯಾಂಗ್ ಇನ್ಸ್ಟಾಗ್ರಾಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಅಮರನಾಥ್ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲು.

ಕಲಬುರಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

ಪ್ರಿಯಾಂಕ್ ಖರ್ಗೆ , ಯತೀಂದ್ರ ಸಿದ್ದರಾಮಯ್ಯ ಅವರನ್ನ ಟ್ರೋಲ್ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳಿಗೆ ನೋವುಂಟಾಗಿದೆ.

ಗುಲಾಮ್ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಮರನಾಥ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net