ಕಾಂಗ್ರೆಸ್​ನ ಹಿರಿಯ ನಾಯಕಿ ನಿಧನ; ರಾಜ್ಯ ಮತ್ತು ಕೇಂದ್ರದ ಹುದ್ದೆ ನಿರ್ವಹಿಸಿದ್ದ ನಾಯಕಿ ಇನ್ನಿಲ್ಲ

shanta
Published on

ಧಾರವಾಡ: ಸರ್ಕಾರದ ವಿವಿಧ ಅಧಿಕಾರಗಳನ್ನು ನಿರ್ವಹಿಸಿದ್ದ ಕಾಂಗ್ರೆಸ್​ ಹಿರಿಯ ನಾಯಕಿ ಡಾ. ಶಾಂತಾ ಪಿ. ಹಲಗಿ (67) ನಿಧನರಾಗಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದುದ್ದಾಗಿ ಹೇಳಲಾಗಿದೆ.

ಶಾಂತಾ ಅವರು ಚಲನಚಿತ್ರ ಸೆನ್ಸಾರ್ ಮಂಡಳಿ ಪ್ರಾದೇಶಿಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಮಾಜ ಕಲ್ಯಾಣ ಸಲಹಾ ಮಂಡಳಿ, ಮದ್ಯಪಾನ ಸಂಯಮ ಮಂಡಳಿ, ರಾಜ್ಯ ಮಹಿಳಾ ಆಯೋಗಗಳಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೊದಲಿಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ಕಾಂಗ್ರೆಸ್​ ಪಕ್ಷದಲ್ಲಿ ಉತ್ತಮ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

ರಾಜ್ಯ ಮತ್ತು ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದ ಹಿರಿಯ ನಾಯಕಿ ಶಾಂತಾ ಬುಧವಾರದಂದು ಧಾರವಾಡದ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net