ಕಾಂಗ್ರೆಸ್ ಕಟ್ಟಾಳು ಹರ್ಕೂರು ಮಂಜಯ್ಯ ಶೆಟ್ಟಿ ಬಿಜೆಪಿ ಸೇರಿದ್ರು..

harkuru manjayya Shetty joins bjp
Published on

ಕುಂದಾಪುರ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಆಲೂರು – ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ ಅವರು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಶಾಸಕರು ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಹರ್ಕೂರು ಮಂಜಯ್ಯ ಶೆಟ್ಟಿಯವರನ್ನು ಬಿಜೆಪಿಗೆ ಆತ್ಮೀಯವಾಗಿ ಬರಮಾಡಿಕೊಂಡರು.

ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ.‌ಸದಸ್ಯರಾದ ರೋಹಿತ್ ಕುಮಾರ್ ಶೆಟ್ಟಿ, ಶಂಕರ ಪೂಜಾರಿ, ಶೋಭಾ ಜಿ. ಪುತ್ರನ್, ತಾ.ಪಂ.‌ ಉಮೇಶ್ ಶೆಟ್ಟಿ ಕಲ್ಗದ್ದೆ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net