ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

oscar fernadis
Published on

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಯೋಗ ಮಾಡುವಾಗ ಜಾರಿ ಬಿದ್ದು ಗಾಯಗೊಂಡಿದ್ದು, ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿದಿನ ಲಘು ಯೋಗಾಭ್ಯಾಸ ಮಾಡುವ ಅವರು ಸೋಮವಾರ ಬೆಳಗ್ಗೆ ಮನೆಯಲ್ಲಿ ಯೋಗ ನಿರತರಾಗಿದ್ದಾಗ ನಿಯಂತ್ರಣ ಕಳೆದುಕೊಂಡು ಬಿದ್ದಿದ್ದರು. ಯಾವುದೇ ಗಾಯ ಆಗದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಆಸ್ಕರ್ ವಾರಕ್ಕೆ ಮೂರು ದಿನ ಡಯಾಲಿಸಿಸ್‌ಗೆಂದು ಯೇನೆಪೋಯ ಆಸ್ಪತ್ರೆಗೆ ತೆರಳುತ್ತಾರೆ. ಅದರಂತೆ, ಸೋಮವಾರ ಸಾಯಂಕಾಲ ಆಸ್ಪತ್ರೆಗೆ ಹೋದಾಗ ವೈದ್ಯರಲ್ಲಿ ಈ ಬಗ್ಗೆ ತಿಳಿಸಿದ್ದರು. ಮೇಲ್ನೋಟಕ್ಕೆ ಆರೋಗ್ಯವಾಗಿದ್ದರೂ ಪರೀಕ್ಷೆ ನಡೆಸಿದಾಗ ತಲೆಯ ಒಳಗೆ ರಕ್ತ ಹೆಪ್ಪುಗಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರಸಕ್ತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net