ಸರ್ಕಾರದ ಸಾಧನೆ ಸಹಿಸದ ಬಿಜೆಪಿ,ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ ಆಕ್ಷೇಪ

IMG_20230830_171523_662-1.jpg
Published on

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನಪ್ರಿಯತೆ ಗಳಿಸುತ್ತಿದೆ, ಇದನ್ನು ಸಹಿಸಲಾಗದೇ ಬಿಜೆಪಿಯವರು ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ಷೇಪಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನೂರು ದಿನ ಪೂರೈಸಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ರಾಜ್ಯದ ಜನರು ಸಂಭ್ರಮದಲ್ಲಿದ್ದಾರೆ. ಈ ಹಿಂದೆ ಆಡಳಿತ ನಡೆಸಿದ ಬಿಜೆಪಿಯವರು ಎಲ್ಲ ರಂಗದಲ್ಲಿ ವಿಲರಾಗಿದ್ದರು. ಜನ ಅವರಿಂದ ಬೇಸತ್ತು ಕಾಂಗ್ರೆಸ್‌ಗೆ ಮತ ನೀಡಿದರು. ಜನರ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ನಮ್ಮ ಪಕ್ಷ ಮಾಡುತ್ತಿದೆ ಎಂದರು.

ಮುಂದಿನ ಆರು ತಿಂಗಳು ಕಾಂಗ್ರೆಸ್ ಸರ್ಕಾರದ ರಿಪೋರ್ಟ್ ಕಾರ್ಡ್ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ವೈಲ್ಯಗಳನ್ನು ಜನರ ಮುಂದೆ ಇಡುತ್ತೇವೆ. ಮಹಿಳೆಯರು, ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡಿದರೂ ಸಿಲಿಂಡರ್ ಬೆಲೆ ಇಳಿಸದ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಏಕಾಏಕಿ 200 ರೂ. ಇಳಿಕೆ ಮಾಡಿದ್ದಾರೆ. ಇದು ಮುಂಬರುವ ಚುನಾವಣೆ ಗಿಮಿಕ್ ಅಷ್ಟೇ. ಜನ ಅಷ್ಟು ಸುಲಭವಾಗಿ ಇವರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಮನೆಗೆ ಹೋಗುವುದು ಗ್ಯಾರಂಟಿ ಎಂದರು.

ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ. ಬೆಂಗಳೂರಿಗೆ ಬಂದಾಗ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕರತ್ತ ನೋಡದೇ ಒಂದು ರೀತಿ ಕಪಾಳ ಮೋಕ್ಷ ಮಾಡಿ ಹೋಗಿದ್ದಾರೆ. ಹಿಂದಿನ ಸರ್ಕಾರದ ಮೇಲಿರುವ ಎಲ್ಲ ಆರೋಪಗಳನ್ನು ತನಿಖೆ ಮಾಡಿಸಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ತೊಂದರೆ ಇಲ್ಲ, ಅಭಿವೃದ್ಧಿ ಕಾರ್ಯಗಳಿಗೂ ಹಣ ನೀಡುವುದಾಗಿ ಸಿಎಂ ಈಗಾಗಲೇ ಭರವಸೆ ನೀಡಿದ್ದಾರೆ. ಹಾಗಾಗಿ ಜನರಿಗೆ ಯಾವುದೇ ತೊಂದರೆ ಆಗುವುದಿಲ್ಲ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆದಿಲ್ಲ. ಈ ಕುರಿತು ದಾಖಲೆ ನೀಡಿದರೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಆಪರೇಶನ್ ಅಗತ್ಯ ಇಲ್ಲ. ಕೆಲ ಜಿಲ್ಲೆಯಲ್ಲಿ ಅಲ್ಲಿನ ನಾಯಕರು ಬಿಜೆಪಿ, ಜೆಡಿಎಸ್ನಿಂದ ನೊಂದು ನಮ್ಮ ಪಕ್ಷ ಸೇರಲು ಉತ್ಸುಕತೆ ತೋರಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲ ಪಾಟೀಲ, ಸತೀಶ ಮೆಹರವಾಡೆ, ರವಿ ಬಡ್ನಿ, ಬಂಗಾರೇಶ ಹಿರೇಮಠ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net