

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವ ಮಾಜಿ ಶಾಸಕ ಸುರೇಶ್‌ಗೌಡ ಅವರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ಹೇಳಿದರು.
ಚಲುವರಾಯಸ್ವಾಮಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಇದನ್ನು ಸಹಿಸದೆ ಸುರೇಶ್‌ಗೌಡ ಅವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾತ್ರವಲ್ಲದೆ ಸಚಿವರನ್ನು ಏಕವಚನದಲ್ಲಿ ಮಾತನಾಡುತ್ತಿದ್ದು ಇದು ಸರಿಯಲ್ಲ. ನಮಗೂ ಕೂಡ ಮಾತನಾಡಲು ಗೊತ್ತಿದೆ. ಆದರೆ ಅದು ನಮ್ಮ ಸಂಸ್ಕೃತಿಯಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಕೀಲಾರ ಕೃಷ್ಣ , ಶ್ರೀಧರ್, ಶಿವಲಿಂಗು, ಸೋಮಶೇಖರ್ ಇತರರಿದ್ದರು.