ಆತ್ಮಹತ್ಯೆಗೆ ಯತ್ನಿಸಿದ್ದ ಕಾಂಗ್ರೆಸ್ ಮುಖಂಡ ಸಾವು

sul-jan1-sudheer
Published on

ಸುಳ್ಯ: ಕೆಲದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವ ಕಾಂಗ್ರೆಸ್ ಮುಖಂಡ ಸುಧೀರ್ ರೈ ಮೇನಾಲ(48) ಭಾನುವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಎಳವೆಯಲ್ಲೇ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷ ಸಹಿತ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಕ್ರಮ ಸಕ್ರಮ ಸಮಿತಿ ಸದಸ್ಯರಾಗಿದ್ದರು. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net