ಎಲೆಕ್ಷನ್ ಎದುರಿಸೋ ನೈತಿಕ ಶಕ್ತಿ ಕೈ ಕಳೆದುಕೊಂಡಿದೆ: ನಳಿನ್​ ಕುಮಾರ್ ಕಟೀಲ್​

nalin
Published on

ಮೈಸೂರು: ತಮ್ಮದೇ ಪಕ್ಷದ ಶಾಸಕನಿಗೆ ರಕ್ಷಣೆ ನೀಡಲು ವಿಫಲವಾದ ಕಾಂಗ್ರೆಸ್ ಚುನಾವಣೆ ಎದುರಿಸುವ ನೈತಿಕ ಶಕ್ತಿ ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ಟೀಕಿಸಿದರು.

ಗುರುವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಪಕ್ಷದ ನಾಯಕರು ರಕ್ಷಣೆ ನೀಡಬೇಕಾಗಿತ್ತು. ಆದರೆ, ಅವರೇ ಮನೆಯನ್ನು ಸುಡುವ ಕೆಲಸ ಮಾಡಿದರು. ಗಲಭೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ ಎಂದು ಒತ್ತಾಯಿಸುವ ಧೈರ್ಯವನ್ನು ಕಾಂಗ್ರೆಸ್ ತೋರುತ್ತಿಲ್ಲ ಎಂದು ಜರಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಟೀಕೆಗಳನ್ನು ಮಾಡಲು ಬಯಸುವುದಿಲ್ಲ. ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ವಿಚಾರಗಳನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯ ಕಡೆಗೆ ಒಲವು ತೋರುತ್ತಿದ್ದು, ಪಕ್ಷ ಗೆಲುವು ಸಾಧಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net