ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯ: ರಾಜ್ಯ ಮಡಿವಾಳ ಸಮಾಜದ ಮುಖಂಡ ಕೆ.ವಿ.ಅಮರನಾಥ್ ಹೇಳಿಕೆ

Madivala Sabe)
Published on

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದರಿಂದ ಎಲ್ಲ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಲಭಿಸಲಿದೆ ಎಂದು ರಾಜ್ಯ ಮಡಿವಾಳ ಸಮಾಜದ ಮುಖಂಡ ಕೆ.ವಿ.ಅಮರನಾಥ್ ಹೇಳಿದರು.

ನಗರದ ಕರ್ನಾಟಕ ಸಂಘ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾ ಮಡಿವಾಳ ಸಮಾಜದಿಂದ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಹಿಂದುಳಿದ ವರ್ಗಗಳಲ್ಲಿಯೇ ಅತಿ ಹಿಂದುಳಿದಿರುವುದು ಮಡಿವಾಳ ಸಮಾಜ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಮುದಾಯದ ಐವರಿಗೆ ನಿಗಮ ಮಂಡಳಿ ಹಾಗೂ ಆಯೋಗಗಳಿಗೆ ಅಧ್ಯಕ್ಷ ಹುದ್ದೆ ನೀಡಿದ್ದರು. ಈ ಮೂಲಕ ಸಮುದಾಯಕ್ಕೆ ಹೆಚ್ಚಿನ ಶಕ್ತಿ ಕೊಟ್ಟಿದ್ದು ಸಿದ್ದರಾಮಯ್ಯ ಅವರು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಸಮಿತಿ ಅಧ್ಯಕ್ಷ ಗುರುರಾಜ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸಮಾಜದ ಒಬ್ಬರನ್ನು ಎಂಎಲ್ಸಿ ಮಾಡುವುದು ಸೇರಿದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸಮಾಜದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಿ, ಸಮಾಜದ ಅಭಿವೃದ್ದಿಗೆ ಯೋಜನೆಗಳನ್ನು ರೂಪಿಸಿ ಎಂದು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಕೆಪಿಸಿಸಿ ಸದಸ್ಯ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ನಗರಾಧ್ಯಕ್ಷ ರುದ್ರಪ್ಪ, ಸಾತನೂರು ಕೃಷ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net