

ಮಂಗಳೂರು : ದ.ಕ.ಜಿಲ್ಲಾ ಕಾಂಗ್ರೆಸ್‌ನ ಮಾಸಿಕ ಸಭೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು,
ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ ‘ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸುತ್ತೋಲೆಗಳನ್ನು ಹೊರಡಿಸಿದೆ. ಅವುಗಳನ್ನು ಕಟ್ಟುನಿಟ್ಟಾಗಿ ಬ್ಲಾಕ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು ಎಂದರು.
ಲೋಕಸಭೆಯ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿ ಅವರಿಗೆ ಜಿಲ್ಲಾ ಸಮಿತಿಯಿಂದ ಅಭಿನಂದಿಸಲಾಯಿತು. ಲೋಕಸಭಾ ಚುನಾವಣೆ ಸೋಲಿನ ಬಗ್ಗೆ ಪರಾಮರ್ಶಿಸಲಾಯಿತು. ಬ್ಲಾಕ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮತ್ತು ಕಾರ್ಯಕ್ರಮ ಅನುಷ್ಠಾನಗೊಳಿಸಲು ಬ್ಲಾಕ್ ಸಂಯೋಜಕರನ್ನು ನೇಮಿಸಲಾಯಿತು.ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ಧತೆ, ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ನಿರ್ಣಯಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಇನಾಯತ್ ಅಲಿ, ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಸದಾಶಿವ್ ಉಳ್ಳಾಲ್, ಶಶಿಧರ್ ಹೆಗ್ಡೆ , ನವೀನ್ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.