ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಿ: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಒತ್ತಾಯ

Ravikumar Ganiga
Published on
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಶಾಸಕ ರವಿಕುಮಾರ್ ಗಣಿಗ ಅವರು ಬೆಂಬಲ ಸೂಚಿಸಿ ಭಾಗವಹಿಸಿದರು.
ಸುಪ್ರೀಂ ಕೋರ್ಟ್ ಕಾವೇರಿ ನದಿ ನೀರು ಹಂಚಿಕೆ ಸಂಬಂಧದ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿದ ಕಾರಣ ಮುಂದಿನ ಹೋರಾಟ ಕುರಿತು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಸಭೆ ನಡೆಸುತ್ತಿದ್ದ ಸಂದರ್ಭ ಆಗಮಿಸಿದ ಶಾಸಕ ರವಿಕುಮಾರ್ ಗಣಿಗ ಅವರು, ಸದಸ್ಯರೊಂದಿಗೆ ಚರ್ಚೆಯಲ್ಲಿ ಭಾಗವಹಿಸಿ ಸಮಿತಿಯ ತೀರ್ಮಾನದ ಹೋರಾಟಕ್ಕೆ ಹಾಗೂ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಿರುವುದಾಗಿ ತಿಳಿಸಿದರು.
ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪು ನೀಡಲಿದೆ ಎಂದು ನಂಬಿಕೊಂಡಿದ್ದೆವು. ಆದರೆ, ಸೆ.21ಕ್ಕೆ ವಿಚಾರಣೆ ಮುಂದೂಡಿರುವುದು ಸರಿಯಲ್ಲ. ಇದರಿಂದ ಮಂಡ್ಯ ಸೇರಿದಂತೆ ೫ ಜಿಲ್ಲೆಗಳ ರೈತರಿಗೆ ತೊಂದರೆಯಾಗಲಿದೆ. ಅಲ್ಲದೆ, ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ತ‌‌.ನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net