ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸತ್ಯಕ್ಕೆ ಹತ್ತಿರ

mahesh T
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂಬ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸತ್ಯಕ್ಕೆ ಹತ್ತಿರವಾಗಿದೆ. ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳಿಗೆ ಹಣ ಇಲ್ಲವಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ 54 ಸಾವಿರ ಕೋಟಿ ರೂ. ಹಂಚಿಕೆ ಮಾಡಿದೆ. ಇದರಿಂದ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂಬುದು ಕಾಂಗ್ರೆಸ್ ಶಾಸಕರ ಅರಿವಿಗೆ ಬರುತ್ತಿದೆ. ಅದೇ ಕಾರಣಕ್ಕೆ ಅವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡಿ ಎಂದು ಹೇಳುತ್ತಿದ್ದಾರೆ. ನನ್ನ ಕ್ಷೇತ್ರದಲ್ಲೂ ಅಧಿಕಾರಿಗಳು ಹಲವು ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಿಂದ ಹಣ ಬಂದಿಲ್ಲವೆಂದು ಹೇಳಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ತಕ್ಕಂತೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಪೂರಕವಾದ ಫಲಿತಾಂಶ ಬಂದಿಲ್ಲ. ಅದಕ್ಕಾಗಿ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸರಿಯಾಗಿದೆ. ಅವರ ಅಭಿಪ್ರಾಯವನ್ನು ನಾವು ಬೆಂಬಲಿಸುತ್ತೇವೆ. ಆದರೆ, ಗ್ಯಾರಂಟಿ ಯೋಜನೆಗಳ ವಿರೋಧಿಗಳು ನಾವಲ್ಲ ಎಂದು ಸ್ಪಷ್ಟಪಡಿಸಿದರು.

ಜೋಶಿ ಸಮರ್ಥರು

ಪ್ರಲ್ಹಾದ ಜೋಶಿ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ನೀಡಲಾಗಿದೆ. ಅವರು ಯಾವುದೇ ಖಾತೆಯನ್ನು ನಿಭಾಯಿಸಲು ಸಮರ್ಥರಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net