ಕಾಂಗ್ರೆಸ್​ಗೆ ಕಲಬುರ್ಗಿ ರಾಜೀನಾಮೆ

NK NEW
Published on

ಹುಬ್ಬಳ್ಳಿ : ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ ಅವರಿಗೆ ನಾಗೇಶ ಕಲಬುರ್ಗಿ ಅವರು ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ನಾಗೇಶ ಕಲಬುರ್ಗಿ ಅವರು ಜಗದೀಶ ಶೆಟ್ಟರ್ ಆಪ್ತರೊಲ್ಲಬ್ಬರಾಗಿದ್ದಾರೆ. ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆಯೇ ನಾಗೇಶ ಅವರೂ ಕಾಂಗ್ರೆಸ್​ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net