ಬಿಜೆಪಿಯ ಜನಪ್ರಿಯ ಯೋಜನೆಗಳನ್ನು ಸಹಿಸದ ಕಾಂಗ್ರೆಸ್

kota (4)
Published on

ಕೋಟ: ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಆಡಳಿತ ಜಾರಿಗೊಳಿಸಿದ್ದ ಜನಪ್ರಿಯ ಯೋಜನೆಗಳನ್ನು ಸಹಿಸದೆ ಅದಕ್ಕೆ ಮುಕ್ತಿಗಾಣಿಸಲು ಮುಂದಾಗಿದೆ ಎಂದು ಬಿಜೆಪಿ ಮುಖಂಡ ಸುರೇಶ್ ಪೂಜಾರಿ ಪಾಂಡೇಶ್ವರ ಹೇಳಿದರು.

ಮಂಗಳವಾರ ಪಾಂಡೇಶ್ವರ ಗ್ರಾಮ ಪಂಚಾಯಿತಿ ಎದುರು ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.

ಇದೇ ವೇಳೆ ಜನಸಂದ ಶ್ಯಾಮಾಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ ಸರ್ಕಾರದ ನಡೆಯನ್ನು ಖಂಡಿಸಿದರು.

ಶಕ್ತಿ ಕೇಂದ್ರದ ವಾಜಿ ಅಧ್ಯಕ್ಷ ಕೆ.ವಿ.ರಮೇಶ್ ರಾವ್ ಪಾಂಡೇಶ್ವರ, ಪಂಚಾಯಿತಿ ಮಾಜಿ ಅಧ್ಯಕ್ಷ ಗೋವಿಂದ ಪೂಜಾರಿ, ವಾಜಿ ಸದಸ್ಯ ವಿಲ್ಫ್ರೆಡ್, ಪಂಚಾಯಿತಿ ಸದಸ್ಯರಾದ ರವೀಶ್ ಶ್ರೀಯಾನ್, ಸಂಧ್ಯಾ ರಾವ್, ಸುಜಾತಾ ವೆಂಕಟೇಶ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯಿತಿ ಸದಸ್ಯ ಪ್ರತಾಪ್ ಶೆಟ್ಟಿ ಸಾಸ್ತಾನ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net