ಎರಡು ನಾಲಿಗೆಯ ಕಾಂಗ್ರೆಸ್

BOMMAI
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜಿಂದಾಲ್ ಕಂಪನಿಗೆ ಭೂಮಿ ನೀಡಲು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಈಗ ಅವರೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ಮುಂದಾಗಿರುವುದು ಅವರ ಎರಡು ನಾಲಿಗೆಯನ್ನು ತೋರಿಸುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಜಮೀನು ಮಾರಾಟ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಚಿವ ಸಂಪುಟ ಮಾತ್ರವಲ್ಲದೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗಿದೆ ಎಂದರು.

ರಾಜ್ಯ ಸರ್ಕಾರ ಕಳುಹಿಸುವ ಮಸೂದೆಗಳಿಗೆ ಅನುಮೋದನೆ ನೀಡುವ ಹಾಗೂ ವಾಪಸ್ ಕಳುಹಿಸುವ ವಿವೇಚನೆ ರಾಜ್ಯಪಾಲರಿಗೆ ಇರುತ್ತದೆ. ಸಾರ್ವಜನಿಕ ಹಿತಾಸಕ್ತಿ ಇಲ್ಲದ ಮಸೂದೆಗಳನ್ನು ತಡೆಹಿಡಿಯುವ ಮತ್ತು ರಾಷ್ಟ್ರಪತಿಗೆ ಕಳುಹಿಸುವ ಅಧಿಕಾರ ರಾಜ್ಯಪಾಲರಿಗೆ ಇದೆ. ಇದಕ್ಕೂ, ಬಿಜೆಪಿಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಡಾ ಹಗರಣವು ಕಾನೂನಿನ ಮೂಲಕವೇ ಇತ್ಯರ್ಥವಾಗಬೇಕು. ಆದರೆ, ರಾಜಕೀಯಕ್ಕಾಗಿ ಮುಖ್ಯಮಂತ್ರಿ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಮುಂದೆ ಶಾಸಕರ ಪರೇಡ್ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net