‘ಕೈ’ಹಿಡಿದ ಸಿಂಧನೂರು ಜೆಡಿಎಸ್ ತಾಲೂಕು ಅಧ್ಯಕ್ಷ; ಸಿದ್ದರಾಮಯ್ಯ ನೇತೃತ್ವದಲ್ಲಿ ಎಂ.ಲಿಂಗಪ್ಪ ದಢೇಸುಗೂರು ಪಕ್ಷ ಸೇರ್ಪಡೆ

231220 Sindhanuru M Lingappa Congress Join
ಸಿಂಧನೂರು ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಲಿಂಗಪ್ಪ ದಢೇಸುಗೂರು ಅಂಕಲಿಮಠಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಬುಧವಾರ ಅಧಿಕೃತವಾಗಿ ಸೇರ್ಪಡೆಗೊಂಡರು.
Published on

ಸಿಂಧನೂರು: ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಲಿಂಗಪ್ಪ ದಢೇಸುಗೂರು ಅಂಕಲಿಮಠದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಬುಧವಾರ ಅಧಿಕೃತವಾಗಿ ಸೇರ್ಪಡೆಗೊಂಡರು.

ಎರಡ್ಮೂರು ದಿನಗಳಿಂದ ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ಲಿಂಗಪ್ಪ ರಾಜೀನಾಮೆ ಪ್ರಹಸನ ನಡೆದಿತ್ತು. ಬೆಳಗ್ಗೆ ರಾಜೀನಾಮೆ ಕೊಟ್ಟು, ಮಧ್ಯಾಹ್ನದ ನಂತರ ರಾಜೀನಾಮೆ ಕೊಟ್ಟಿಲ್ಲ ಎಂದಿದ್ದರು. ಆದರೆ, ಇಷ್ಟಕ್ಕೆ ಸುಮ್ಮನಾಗದ ಎಂ.ಲಿಂಗಪ್ಪ ದಢೇಸುಗೂರು, ಮಾಜಿ ಶಾಸಕ ಹಂಪನಗೌಡ ಬಾದರ್ಲಿಯೊಂದಿಗೆ ಕಾಂಗ್ರೆಸ್ ಸೇರ್ಪಡೆಗೆ ಚರ್ಚಿಸಿದ್ದರು. ಅಂಕಲಿಮಠದ ಶ್ರೀ ವೀರಭದ್ರ ಸ್ವಾಮೀಜಿ ಪುತ್ರನ ಮದುವೆಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರಿಂದ ಹೂಮಾಲೆ ಹಾಕಿಸಿಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ಸೇರಿಕೊಂಡರು.

ಕಾಂಗ್ರೆಸ್ ಮುಖಂಡ ರಾಜುಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಖಾಜಿ ಮಲ್ಲಿಕ್ ವಕೀಲ, ನಗರಸಭೆ ಮಾಜಿ ಅಧ್ಯಕ್ಷ ಸೈಯ್ಯದ್ ಜಾಫರ ಜಹಗೀರದಾರ್, ಸಂಜಯ ಪಾಟೀಲ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net