ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆ ಅಳಿವು ಉಳಿವಿನ ಪ್ರಶ್ನೆ : ಸಚಿವ ಕೃಷ್ಣಭೈರೇಗೌಡ

Krishna byregowda
Published on

ಮೈಸೂರು: ಲೋಕಸಭಾ ಚುನಾವಣೆಯು ಕಾಂಗ್ರೆಸ್ ಪಕ್ಷದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಕಾಂಗ್ರೆಸ್ ಪಕ್ಷ ಉಳಿಯಬೇಕಾದರೆ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲೇ ಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿ ಜಿಲ್ಲಾ ಹಾಗೂ ನಗರ ಕಾಂಗ್ರೆಸ್ ಸಮಿತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾ ಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ಮೈಸೂರು ಭಾಗದಲ್ಲಿ ಪಕ್ಷ ಗೆಲುವು ಸಾಧಿಸಲು ಉತ್ತಮ ವಾತಾವರಣ ಇದ್ದು, ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ನಿಗಮ ಮಂಡಳಿ ನೇಮಕ ಪ್ರಕ್ರಿಯೆಯನ್ನು ಫೆಬ್ರವರಿಯೊಳಗೆ ಮುಕ್ತಾಯಗೊಳಿಸಲಾಗುವುದು. ಆದ್ಯತೆಯ ಮೇರೆಗೆ ಶಾಸಕರು, ಟಿಕೆಟ್ ವಂಚಿತ ಮುಖಂಡರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡಲಾಗುವುದು. ಅದೇ ರೀತಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲು ಪಕ್ಷದ ವರಿಷ್ಠರು ಚರ್ಚಿಸಿದ್ದು, ಕಾರ್ಯಕರ್ತರನ್ನು ನಿರ್ಲಕ್ಷೃ ಮಾಡಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net