ಕಾಂಗ್ರೆಸ್‌ನಿಂದ ಜನವಿರೋಧಿ ಆಡಳಿತ

bjp and congress tweet war
Published on

ಹೊಸಪೇಟೆ: ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಹಾಗೂ ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ಧೋರಣೆ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎನ್.ಕೊಟ್ರೇಶಪ್ಪ ಬಾಗಳಿ ಆರೋಪಿಸಿದರು.

ಇದನ್ನೂ ಓದಿ:http://ಕಾಂಗ್ರೆಸ್‌ನಿಂದ ಜನವಿರೋಧಿ ಆಡಳಿತ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರೈತರ ಉತ್ಪನ್ನಗಳಿಗೆ ಸ್ಪರ್ಧಾತ್ಮಕವಾಗಿ ಬೆಲೆ ದೊರೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿತ್ತು.

ಕೃಷಿಕರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ವಿದ್ಯಾಸಿರಿ ಯೋಜನೆ, ಅನ್ನದಾತನಿಗೆ ನೆರವಾಗಲು ಕಿಸಾನ್ ಸಮ್ಮಾನ್ ಯೋಜನೆ, ಭೂಸಿರಿ ಯೋಜನೆ, ರೈತ ಶಕ್ತಿ ಯೋಜನೆಗಳನ್ನು ಬಿಜೆಪಿ ಸರ್ಕಾರ ಕೇಂದ್ರದ ಸಹಯೋಗದಲ್ಲಿ ಜಾರಿಗೊಳಿಸಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಯೋಜನೆಗಳನ್ನು ಸ್ಥಗಿತಗೊಳಿಸಿದೆ.

ಇದರಿಂದ ರಾಜ್ಯದ ಜನ ಸಾಮಾನ್ಯರಿಗೆ ತೊಂದರೆಯಾಗಲಿದೆ ಎಂಬುದುನ್ನು ಸಿಎಂ ಸಿದ್ದರಾಮಯ್ಯ ಮರೆಯಬಾರದು ಎಂದರು.
ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರುವ ಅಕ್ರಮ ವ್ಯವಹಾರ, ರೈತರ ಶೋಷಣೆ ಮತ್ತೆ ಆರಂಭವಾಗಲಿದೆ.

ನಾಡಿನ ರೈತರು ಮತ್ತು ಜನ ಸಾಮಾನ್ಯರ ಹಿತದೃಷ್ಟಿಯಿಂದ ಹಿಂದಿನ ಸರ್ಕಾರದ ಯೋಜನೆಗಳನ್ನು ಮತ್ತ ಆರಂಭಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಪ್ರಮುಖರಾದ ಚಿದಾನಂದ ಸೂಗೂರು, ಸಾಲಿ ಸಿದ್ದಯ್ಯ ಸ್ವಾಮಿ, ಶಂಕರ ಮೇಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net