ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯ ಒತ್ತೆ ಇಟ್ಟ ಕಾಂಗ್ರೆಸ್​

11 vikram 9
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಒಂದಾದ ಮೇಲೊಂದರಂತೆ ನಡೆಯುತ್ತಿವೆ. ಅಷ್ಟೇ ಅಲ್ಲದೆ, ಕಾಂಗ್ರೆಸ್​ ಸರ್ಕಾರ ಇಂತಹ ಅಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವುದು ಸ್ಪಷ್ಟವಾಗಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​, ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಉದಾಹರಣೆ.
ಬುಧವಾರ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಸಮಯದಲ್ಲಿ ಮುಸ್ಲಿಂ ಪುಂಡರು ಮೆರವಣಿಗೆಗೆ ಅಡ್ಡಿಪಡಿಸಲೆಂದೇ ದಾಂಧಲೆ ಎಬ್ಬಿಸಿ ಚಪ್ಪಲಿ ತೂರಾಟ, ಕಲ್ಲು ತೂರಾಟ, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿರುವ ಕೃತ್ಯ ಕಾಂಗ್ರೆಸ್​ ಸರ್ಕಾರದ ಹದಗೆಟ್ಟ ಕಾನೂನು ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಸರ್ಕಾರ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಬೇಕು. ನಮ್ಮ ರಾಜ್ಯದಲ್ಲಿ ಶಾಂತಿ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net