

ಉಡುಪಿ: ಮಂಗಳೂರು ಬಿಜೆಪಿ ವಿಜಯೋತ್ಸವದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಪ್ರಕರಣ ಗಮನಿಸಿದರೆ ಇಡೀ ಪೊಲೀಸ್ ವ್ಯವಸ್ಥೆ ಕಾಂಗ್ರೆಸ್ ಕಚೇರಿ ಒಳಗೆ ಕೆಲಸ ಮಾಡುತ್ತಿದೆ ಎಂಬುದಾಗಿ ಭಾಸವಾಗುತ್ತಿದೆ. ಚೂರಿ ಇರಿತ ಮಾಡಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ ವಿಜಯೋತ್ಸವದಲ್ಲಿ ಭಾಗವಹಿಸಿದವರ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಪೋಲಿಸ್ ಇಲಾಖೆ ಕಾಂಗ್ರೆಸ್ಸಿನ ಕಪಿಮುಷ್ಠಿಯಲ್ಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಚುಕ್ಕಾಣಿ ಹಿಡಿದಿದ್ದಾರೆ. ಈ ಬಗ್ಗೆ ಎಲ್ಲಾ ಗ್ರಾಮಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ಕರಾವಳಿಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಹೀಗಾಗಿ ಅನ್ಯ ಕೋಮಿನ ಕಾಂಗ್ರೆಸ್ ನ ಬೆಂಬಲಿತರು ಪುಂಡಾಟಿಕೆ ಮಾಡಿದ್ದಾರೆ. ಗೃಹ ಇಲಾಖೆ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಬೇಕು. ಬಿಜೆಪಿಯ ಪ್ರಮುಖರು ಒಟ್ಟಾಗಿ ನ್ಯಾಯ ಕೊಡುವ ಕೆಲಸ ಮಾಡಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ. ಕಾಂಗ್ರೆಸ್ ನಾಯಕರ ಪರ್ಮಿಷನ್ ತೆಗೆದುಕೊಂಡು ಪೊಲೀಸರು ಕೆಲಸ ಮಾಡಬೇಕಾಗಿದೆ. ಇಂತಹ ಕೃತ್ಯಗಳಿಂದ ಆರ್ಥಿಕತೆಯ ಮೇಲೆ ಹೊಡೆತ ಬೀಳುತ್ತದೆ. ವಿಜಯೋತ್ಸವ ಪಕ್ಷದ ಹಕ್ಕು. ಕಾಂಗ್ರೆಸ್ ಗೆ ಅದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಶ್ರೀಘ್ರದಲ್ಲಿ ಆಸ್ಪತ್ರೆಗೆ ಭೇಟಿಕೊಟ್ಟು ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಲಾಗುವುದು ಎಂದು ಹೇಳಿದರು.