

ಮಂಡ್ಯ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ಹೇಳಿದರು.
ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಜ್ಞಾವಂತ ನಾಗರಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಗ್ರವಾಗಿ ಖಂಡಿಸುತ್ತೇವೆ. ಅಂತೆಯೇ ಪಕ್ಷಪಾತದಿಂದ ವರ್ತಿಸುತ್ತಿರುವ ರಾಜ್ಯಪಾಲರು ರಾಜ್ಯವನ್ನು ಬಿಟ್ಟು ತೊಲಗಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.
ನಗರಸಭೆ ಸದಸ್ಯ ಶ್ರೀಧರ್, ಕೆಡಿಪಿ ನಾಮನಿರ್ದೇಶಿತ ಸದಸ್ಯ ಸಿ.ಎಂ.ದ್ಯಾವಪ್ಪ, ಕೆ.ಎಲ್.ನಾಗೇಂದ್ರ, ನಾಗೇಶ್, ರಾಜಣ್ಣ ಇದ್ದರು.