ಉಡುಪಿ: ಪಕ್ಷದ ಅಧಿಕೃತ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳದೆ ಕಾಟಾಚಾರಕ್ಕೆ ವಾತ್ರ ಅಕ್ಕಪಕ್ಕದ ಕ್ಷೇತ್ರದ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಪಕ್ಷ ನಿಷ್ಠೆ ಬಗ್ಗೆ ಬೇರೆಯವರಿಗೆ ಬೋಧನೆ ವಾಡುತ್ತಿರುವುದು ವಿಪರ್ಯಾಸ. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಕಡೆ ಕಲ್ಲು ಎಸೆಯುವ ಪ್ರವತ್ತಿ ಬದಲಾಯಿಸಿಕೊಳ್ಳುವುದು ಒಳ್ಳೆಯದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಪ್ರತಿಕ್ರಿಯಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದು ವರ್ಷದಲ್ಲಿ ಸಚಿವೆ ಹೆಬ್ಬಾಳ್ಕರ್ ಎಷ್ಟ್ಟು ಬಾರಿ ಜಿಲ್ಲೆಗೆ ಬಂದಿದ್ದಾರೆ, ಎಷ್ಟು ಸಭೆಗಳನ್ನು ನಡೆಸಿದ್ದಾರೆ? ಕಳೆದ 10 ವಷರ್ಗಳಿಂದ ಸಂಸದೆಯಾಗಿ, ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ಎಷ್ಟ್ಟು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ, ಸಭೆ ನಡೆಸಿದ್ದಾರೆ? ಎನ್ನುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಬಿಜೆಪಿ ಅಧ್ಯಕ್ಷರು ಚರ್ಚೆಗೆ ಬರಲಿ ಎಂದರು.
ಜನಪ್ರತಿನಿಧಿಗಳಾಗಿದ್ದಾಗ ಹಾಗೂ ಅಧಿಕಾರದಲ್ಲಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ವಾಡದೇ ಇದ್ದವರಿಗೆ ವಾತ್ರ ಬೇರೆಯವರ ಹೆಸರಿನಲ್ಲಿ ಮತ ಕೇಳಬೇಕಾದ ಅನಿವಾರ್ಯತೆ ಬರುತ್ತದೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಈ ಅನಿವಾರ್ಯತೆ ಇಲ್ಲ. ಶಾಸಕ, ಸಚಿವ, ಸಂಸದ ಹಾಗೂ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅವರು ವಾಡಿರುವ ಕೆಲಸಗಳನ್ನು ಜನರು ಗಮನಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.