ನಾಯಕರ ಅವಹೇಳನ ಸಲ್ಲ - ಅಶೋಕ್ ಕುಮಾರ್ ರೈ ಹೇಳಿಕೆ

PTR_13 JUL_4
Published on


ಪುತ್ತೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಽ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ಭರತ್ ಶೆಟ್ಟಿ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.


ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಅಽಕಾರ ಇದ್ದಾಗ ಜನ ಜತೆಗೆ ಇರುತ್ತಾರೆ, ಇಲ್ಲದಾಗ ಯಾರೂ ಇರುವುದಿಲ್ಲ ಎಂಬುದನ್ನು ಪ್ರತಿಯೊಬ್ಬರು ತಿಳಿದಿಕೊಳ್ಳಬೇಕಾಗಿದೆ. ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಕೆಲಸ ಮಾಡಬೇಕು. ನಮ್ಮ ಆಚಾರ ವಿಚಾರಕ್ಕೆ ತೊಂದರೆ ಆದರೆ ನಾವು ಸುಮ್ಮನಿರುವುದಿಲ್ಲ. ನಮ್ಮ ನಾಯಕರ ಕುರಿತು ಅವಹೇಳನ ಪದ ಬಳಸಿದರೆ ಕಾಂಗ್ರೆಸ್ ಸುಮ್ಮನಿರುವುದಿಲ್ಲ ಎಂದು ತಿಳಿಸಿದರು.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಮಾತನಾಡಿ, ಮೋದಿ ಆಡಳಿತ ಬಂದ ಬಳಿಕ ಗಣ್ಯ ವ್ಯಕ್ತಿಗಳನ್ನು ದೂಷಿಸುವುದು, ಅವರ ವಿರುದ್ಧ ನಿಲ್ಲುವವರನ್ನು ನಾಶ ಮಾಡುವ ಪ್ರಯತ್ನ ಆಗುತ್ತಿತ್ತು. ಅದು ನಿರಂತರವಾಗಿ ಮುಂದುವರಿದು ಇವತ್ತು ಭರತ್ ಶೆಟ್ಟಿಯವರು ಈ ಅವಹೇಳನ ಮಾತುಗಳನ್ನಾಡುತ್ತಿದ್ದಾರೆ. ಒಬ್ಬ ಶಾಸಕನಾಗಿ ಸಂಸತ್, ವಿಧಾನಸಭೆಯ ಭದ್ರತೆಯ ಕುರಿತು ಗೊತ್ತಿದ್ದರೂ ಸಂಸತ್‌ನೊಳಗೆ ಹೋಗಿ ವಿರೋಧ ಪಕ್ಷದ ನಾಯಕನ ಕಪಾಳಕ್ಕೆ ಹೊಡೆಯುವ ಹೇಳಿಕೆ ದೇಶದ ಭದ್ರತೆಗೆ ಅಪಮಾನ ಮಾಡಿದಂತಾಗಿದೆ ಎಂದರು.


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಂ. ಎಸ್. ಮಹಮ್ಮದ್ ಮಾತನಾಡಿದರು. ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಂ ಕೆ. ಬಿ., ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ, ಕರ್ನಾಟಕ ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಎನ್. ಚಂದ್ರಹಾಸ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net