ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ: ಬೆಂಗಳೂರಲ್ಲಿ ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ

New Project(54)
Published on

ಬೆಂಗಳೂರು: 'ನ್ಯಾಷನಲ್​ ಹೆರಾಲ್ಡ್​' ಸಂಬಂಧ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರು ಇಡಿ(ಜಾರಿ ನಿರ್ದೇಶನಾಲಯ) ಎದುರು ವಿಚಾರಣೆಗೆ ಗುರುವಾರ ಹಾಜರಾಗಿದ್ದಾರೆ. ವಿಚಾರಣೆ ಖಂಡಿಸಿ ದೇಹಲಿ ಸೇರದಂತೆ ದೇಶಾದ್ಯಂತ ಕಾಂಗ್ರೆಸ್​ ಹೋರಾಟ ನಡೆಸುತ್ತಿದೆ. ರಾಜ್ಯದಲ್ಲೂ ಕಾಂಗ್ರೆಸ್​ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಶೇಷಾದ್ರಿಪುರಂ ನೆಹರು ಸರ್ಕಲ್ ಬಳಿ ಕಾರಿಗೆ ಬೆಂಕಿ ಹಚ್ಚಿ ಕೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಪರ ಜೈಕಾರ ಕೂಗುತ್ತಾ ಸಾರ್ವಜನಿಕ ಸ್ಥಳದಲ್ಲಿ ಕಾರೊಂದಕ್ಕೆ ಬೆಂಕಿ ಹಚ್ಚಿದ್ದು, ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಬೆಂಕಿ ನಂದಿಸಿದ್ದಾರೆ. ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾಂಗ್ರೆಸ್​ನ ನಾಲ್ವರು ಯುವ ಮುಖಂಡರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ವೇಳೆ ಆಯಾಸದಿಂದ ಬಳಲಿದ್ದ ಮಾಜಿ ಮೇಯರ್ ರಾಮಚಂದ್ರಪ್ಪ ಕುಸಿದು ಬಿದ್ದರು. ತಕ್ಷಣ ಅಲ್ಲೇ ಇದ್ದ ನಾಯಕರು ಅವರಿಗೆ ನೀರು ಕುಡಿಸಿ ಉಪಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net