ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Youth Congress 9-09
Published on

ಮಂಗಳೂರು: ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಕದ್ರಿ ಸರ್ಕಿಟ್‌ಹೌಸ್ ಬಳಿ ಪ್ರತಿಭಟನೆ ನಡೆಸಿದರು.

ಜೆ.ಆರ್.ಲೋಬೊ ಮಾತನಾಡಿ, ಕದ್ರಿ ಪಾರ್ಕ್ ರಸ್ತೆ ಅಭಿವೃದ್ಧಿಯ ಹೆಸರಲ್ಲಿ ಸಾರ್ವಜನಿಕರಿಗೆ ಸಮಸ್ಯೆಯಾಗುವಂತಹ ಪರಿಸ್ಥಿತಿಯನ್ನು ಬಿಜೆಪಿ ಆಡಳಿತ ಸೃಷ್ಟಿಸಿದೆ. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಅಂದಾಜು ಮಾಡಿದ್ದ ಈ ಯೋಜನೆಗೆ ಈಗ 12 ಕೋಟಿ ರೂ. ನಿಗದಿ ಮಾಡಲಾಗಿದೆ. ಇಲ್ಲಿ ಸಾರ್ವಜನಿಕರ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಲಾಗುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನುಮೋದನೆಯಾದ ಯೋಜನೆಯನ್ನು ಪ್ರಸಕ್ತ ಬಿಜೆಪಿ ಆಡಳಿತ ಅತ್ಯಂತ ಕೆಟ್ಟದಾಗಿ ಕಾಮಗಾರಿ ನಡೆಸುವ ಮೂಲಕ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಆಪಾದಿಸಿದರು.

ಕಾಂಗ್ರೆಸ್ ಮುಖಂಡರಾದ ಮಹಾಬಲ ಮಾರ್ಲ, ಅಬ್ದುಲ್ ಸಲೀಂ, ವಿಶ್ವಾಸ್‌ದಾಸ್, ಟಿ.ಕೆ.ಸುಧೀರ್, ನೀರಜ್‌ಪಾಲ್, ಶುಭೋದಯ ಆಳ್ವ, ಮೋಹನ್ ಶೆಟ್ಟಿ, ಎಸ್.ಅಪ್ಪಿ, ರಮಾನಂದ ಪೂಜಾರಿ, ಸುರೇಶ್ ಶೆಟ್ಟಿ, ಜಯರಾಜ್, ಮಂಜುಳಾ ನಾಯಕ್, ಪ್ರೇಮ್ ಬಲ್ಲಾಳ್‌ಬಾಗ್, ಪ್ರದೀಪ್ ಬೇಕಲ್, ಮಂಜುಳಾ ನಾಯಕ್, ಮಮತಾ ಶೆಟ್ಟಿ, ಶಾಂತಲಾ ಗಟ್ಟಿ, ಡೆನಿಸ್ ಡಿಸಿಲ್ವ, ರಕ್ಷಿತ್ ಸಾಲಿಯಾನ್, ಶಂಸುದ್ದೀನ್, ಟಿ.ಸಿ.ಗಣೇಶ್, ಕೃಷ್ಣ ಕೋಟ್ಯಾನ್, ಮುಧಾಸರ್ ಕುದ್ರೋಳಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net