

ಮಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಮಾಡಿ ಇಡಿ ಕಚೇರಿಗೆ ಕರೆಸಿ ಮಾನಸಿಕ ಹಿಂಸೆ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಿತು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸೋನಿಯಾ ಗಾಂಧಿ ವಿರುದ್ಧ ಸುಳ್ಳು ಆರೋಪ ಹೊರಿಸಿ ವಿಚಾರಣೆ ನಡೆಸುತ್ತಿದ್ದಾರೆ. ತ್ಯಾಗಮಯಿ, ಪ್ರಾಮಾಣಿಕ ಮಹಿಳೆಗೆ ಕಿರುಕುಳ ನೀಡುವುದನ್ನು ಖಂಡಿಸುತ್ತೇವೆ ಎಂದರು.
ಮುಖಂಡರಾದ ಐವನ್ ಡಿಸೋಜ, ಮೊಯ್ದೀನ್ ಬಾವ, ಶಕುಂತಲಾ ಶೆಟ್ಟಿ, ಮಮತಾ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.