ಬಿಜೆಪಿ ನೀಚ ರಾಜಕೀಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

mng--7 oct congress protest
Published on

ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್ ಸೃಷ್ಟಿಸಿ ವಿಕೃತಿ ಮೆರೆದು ನೀಚ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶನಿವಾರ ಲಾಲ್‌ಭಾಗ್ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಹಿರಿಯ ನಾಯಕ ಇಬ್ರಾಹಿಂ ಕೋಡಿಜಾಲ್, ಮಾಜಿ ಮೇಯರ್‌ಗಳಾದ ಹರಿನಾಥ್, ಶಶಿಧರ ಹೆಗ್ಡೆ,ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್ ಆರ್., ಮನಪಾ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ, ಮನಪಾ ಸದಸ್ಯರಾದ ಎ.ಸಿ.ವಿನಯರಾಜ್, ಮಾಜಿ ಸದಸ್ಯರಾದ ಅಪ್ಪಿ, ಪ್ರಕಾಶ್ ಸಾಲ್ಯಾನ್, ಮುಖಂಡರಾದ ವಿಶ್ವಾಸ್‌ಕುಮಾರ್‌ದಾಸ್, ಮುಹಮ್ಮದ್ ಮೋನು, ಸುರೇಶ್ ಬಳ್ಳಾಲ್ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net