ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

20230620_155220
Published on

ಗದಗ: ನಗರದಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ನಿರಾಕರಣೆ ಮಾಡ್ತಾಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕೈ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಕ್ಕಿ ನೀಡದ ಕೇಂದ್ರ ಸರ್ಕಾರದ ನಡೆ ಖಂಡಿಸಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿಯಲಿದ್ದಾರೆ ಎಂದು ಪಕ್ಷದ ಮುಖಂಡರು ಕರೆ ನೀಡಿದ್ದರು. ಅದರಂತೆ ಇಂದು ಪ್ರತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net