

ಹಾನಗಲ್ಲ: ಬೆಳಗಾವಿಯಲ್ಲಿ ಬಿಜೆಪಿ ವಿಪ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕನಕ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ಪೂಜಾರ ಮಾತನಾಡಿ, ಬಿಜೆಪಿಗರದ್ದು ಢೋಂಗಿ ದೇಶಭಕ್ತಿ. ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ಸಿ.ಟಿ. ರವಿ ನಡೆದುಕೊಂಡ ರೀತಿ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದರು. ಪುರಸಭೆ ಅಧ್ಯಕ್ಷೆ ಮಮತಾ ಆರೇಗೊಪ್ಪ, ಅನಿತಾ ಶಿವೂರ, ಮಂಗಳಾ ಬೆಣ್ಣಿ, ಇತರರು ಇತರರಿದ್ದರು. ಮಹಿಳೆಯರಿಗೆ ಅಪಮಾನ ಮಾಡುವುದು, ಅಗೌರವದಿಂದ ನಡೆದುಕೊಳ್ಳುವುದು ಬಿಜೆಪಿಯ ಸಂಸ್ಕೃತಿ. ಬಿಜೆಪಿ ನಾಯಕರ ನಡವಳಿಕೆ ತಲೆ ತಗ್ಗಿಸುವಂತಿದೆ. ಸಿ.ಟಿ. ರವಿ ಅವರನ್ನು ಸಮರ್ಥಿಸಿ ಬಿಜೆಪಿ ನಾಯಕರು ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದ್ದಾರೆ. | ಶ್ರೀನಿವಾಸ ಮಾನೆ ಶಾಸಕ