ಸಹಾಯಧನ ಬಿಡುಗಡೆಗೆ ಒತ್ತಾಯ: ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಪ್ರತಿಭಟನೆ

21_11_Mdy_06(Cong Protest)
Published on

ಮಂಡ್ಯ: ಪರಿಷ್ಕೃತಗೊಂಡಿರುವ ಪಿಂಚಣಿ, ಮದುವೆ ಹಾಗೂ ಹೆರಿಗೆ ಸಹಾಯ ಧನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸರ್‌ಎಂವಿ ಪ್ರತಿಮೆ ಎದುರು ಜಮಾವಣೆಗೊಂಡ ಕಾಂಗ್ರೆಸ್ಸಿಗರು ಬಳಿಕ ಮೆರವಣಿಗೆ ಮೂಲಕ ಸಾಗಿ ಕಾರ್ಮಿಕ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.

ಬಾಕಿ ಇರುವ ಎಲ್ಲ ಅರ್ಜಿಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು. ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸಲು ಆನ್‌ಲೈನ್ ವ್ಯವಸ್ಥೆ ಕಲ್ಪಿಸಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆ ಜಿಲ್ಲಾ ಅಥವಾ ತಾಲೂಕುವಾರು ಕಾರ್ಮಿಕ ಮುಖಂಡರೊಂದಿಗೆ ಸಭೆ ಆಯೋಜಿಸಬೇಕು. ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ಸೇರಿ ಘೋಷಿತ 19 ಸೌಲಭ್ಯಗಳನ್ನು ಜಾರಿಗೊಳಿಸಬೇಕು. ಕಟ್ಟಡ ಕಾರ್ಮಿಕರು ಹಾಗೂ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ವೆಚ್ಚ ನೀಡಬೇಕು. ಚಿಕಿತ್ಸೆಗೊಳಪಡುವ ಕಾರ್ಮಿಕರಿಗೆ ದಿನಕ್ಕೆ 500 ರೂ. ವೇತನ ಪಾವತಿಸಬೇಕು. ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಭವಿಷ್ಯನಿಧಿ ಜಾರಿಗೊಳಿಸಲು ತುರ್ತು ಕ್ರಮ ವಹಿಸಬೇಕು. ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆ ನಿಯಂತ್ರಣಗೊಳಿಸುವುದು ಸೇರಿದಂತೆ 20 ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಕೆ.ಎಂ.ರಾಮಕೃಷ್ಣ, ಚಿದಂಬರ್, ಸತೀಶ್ ಸಿದ್ಧಾರೂಡ, ಕರಿಯಪ್ಪಾಚಾರಿ, ಟಿ.ಕೃಷ್ಣ, ಟಿ.ಕೆ.ಯತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net