ಬಿಜೆಪಿ ಏಜೆಂಟ್​ ರೀತಿ ಚುನಾವಣಾ ಆಯೋಗ ವರ್ತನೆ

udp-14-congress
Published on

ಉಡುಪಿ: ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್​ ರೀತಿ ವರ್ತಿಸುತ್ತಿದೆ. ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷಿ$್ಮ ಹೆಬ್ಬಾಳಕರ್​ ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್​ ಸಮಿತಿಗಳ ವತಿಯಿಂದ 'ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ" ಕಾರ್ಯಕ್ರಮದ ಅಂಗವಾಗಿ ಕ್ಲಾಕ್​ ಟವರ್​ ಗಾಂಧಿ ಪ್ರತಿಮೆ ಬಳಿ ನಡೆದ ಕ್ಯಾಂಡಲ್​ ಲೈಟ್​ ಪ್ರತಿಭಟನೆಯಲ್ಲಿ ಮಾತನಾಡಿದರು. ಚುನಾವಣಾ ಆಯೋಗದ ಧೋರಣೆಯನ್ನು ನೋಡಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಬಿಜೆಪಿ ಹಾಗೂ ಚುನಾವಣಾ ಆಯೋಗ ಸಂವಿಧಾನದ ಹಕ್ಕನ್ನು ಕಸಿಯುತ್ತಿದೆ. ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲುವುದೇ ಬಿಜೆಪಿಗರ ಹುನ್ನಾರವಾಗಿದೆ ಎಂದರು.

ನಮ್ಮ ನಾಯಕ ರಾಹುಲ್​ ಗಾಂಧಿ ಸಾಕ್ಷಿ ಸಮೇತ ಚುನಾವಣಾ ಆಯೋಗದ ಅವ್ಯವಹಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸಂವಿಧಾನ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತದಾನದ ಹಕ್ಕನ್ನು ನೀಡಿದರೆ, ಇಲ್ಲಿ ಒಬ್ಬ ವ್ಯಕ್ತಿ ನಾಲ್ಕು ಬಾರಿ ಮತದಾನ ಮಾಡಿದ ಉದಾಹರಣೆಗಳಿವೆ ಎಂದು ಸಚಿವೆ ಟೀಕಿಸಿದರು.

ಮಾಜಿ ಸಂಸದ ಜಯಪ್ರಕಾಶ್​ ಹೆಗ್ಡೆ, ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು, ಮುಖಂಡರಾದ ಪ್ರಸಾದ್​ ಕಾಂಚನ್​, ರಮೇಶ್​ ಕಾಂಚನ್​, ಹರೀಶ್​ ಕಿಣಿ, ಕಿಶನ್​ ಹೆಗ್ಡೆ ಕೊಳಕೆಬೈಲ್​, ಗಣೇಶ್​ ನೆರ್ಗಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net