'ಕರೊನಾ ರೋಗಿಗಳಿಗೆ ವೆಂಟಿಲೇಟರ್​ ಕೊಡೋಕೆ ಆಗದೆ ಇದ್ರೆ...10 ಲಕ್ಷ ರೂ.ಪರಿಹಾರ ಕೊಡಿ'

Congress Protest
Published on

ದಾವಣಗೆರೆ: ಜಿಲ್ಲೆಯಲ್ಲಿ ಕರೊನಾ ರೋಗಿಗಳ ಸಾವಿನ ಪ್ರಮಾಣ ಹೆಚ್ಚುತ್ತಿದೆ..ಇದಕ್ಕೆ ಕಾರಣ ಆಸ್ಪತ್ರೆಗಳಲ್ಲಿ ಇರುವ ಅವ್ಯವಸ್ಥೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಜಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ಸಿಗರು, ಕರೊನಾ ರೋಗಿಗಳಿಗೆ ವೆಂಟಿಲೇಟರ್​ ಒದಗಿಸಲು ಸಾಧ್ಯವಾಗದೆ ಇದ್ದರೆ ಅವರಿಗೆ 10 ಲಕ್ಷ ರೂ.ಪರಿಹಾರ ನೀಡಿ ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ವೆಂಟಿಲೇಟರ್ ಸೌಲಭ್ಯ ಸಿಗದೆ ತೊಂದರೆಗೆ ಒಳಗಾಗುತ್ತಿರುವ ಕರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ವೆಂಟಿಲೇಟರ್ ಒದಗಿಸಿ ರೋಗಿಗಳ ಜೀವ ಕಾಪಾಡಬೇಕಾದುದು ಸರ್ಕಾರದ ಕರ್ತವ್ಯ. ಆದರೆ ಕುಂಟು ನೆಪ ಹೇಳುತ್ತ, ಸಾರ್ವಜನಿಕರ ಜೀವದ ಜತೆ ಚೆಲ್ಲಾಟ ಆಡಲಾಗುತ್ತಿದೆ ಎಂದು ಆರೋಪಿಸಿದರು. ಹಾಗೇ ಕರೊನಾದಿಂದ ಮೃತಪಟ್ಟವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಸದಸ್ಯರಾದ ದೇವರಮನಿ ಶಿವಕುಮಾರ್, ಗಡಿಗುಡಾಳ್ ಮಂಜುನಾಥ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net