ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಶಾಸಕ ಮಹೇಶ ಟೇಟಗಿನಕಾಯಿ ಲೇವಡಿ

New Tenginakayi mahesh New
Published on

ಹುಬ್ಬಳ್ಳಿ : ಕರ್ನಾಟಕ, ಛತ್ತಿಸಘಡ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣೆಯಲ್ಲಿ ಗೆದ್ದು, ಅಧಿಕಾರಕ್ಕೆ ಬಂದಾಗ ಸುಮ್ಮನಿದ್ದ ಕಾಂಗ್ರೆಸ್, ಇದೀಗ ಚುನಾವಣಾ ಆಯೋಗದ ವಿರುದ್ಧ ಹೋರಾಟ ನಡೆಸುತ್ತಿರುವುದು ಎಷ್ಟು ಸೂಕ್ತ ಎಂದು ಶಾಸಕ ಮಹೇಶ ಟೆಂಗಿನಕಾಯಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ಗೆ ಪ್ರಜಾಪ್ರಭುತ್ವದ ಮೇಲಾಗಲಿ, ದೇಶದ ಕಾನೂನಿನ ಮೇಲಾಗಲಿ ನಂಬಿಕೆ ಇಲ್ಲ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗ ಮೋಸ ಮಾಡಿದ್ದು, ಮತಗಳು ಕಳ್ಳತನವಾಗಿದೆ ಎಂದು ಹೇಳಿರುವ ಕಾಂಗ್ರೆಸ್ ಮುಖಂಡರು ್ಷ ಪ್ರತಿಭಟನೆ ನಡೆಸಲು ತಯಾರಿ ನಡೆಸಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಕುಣಿಯಲಿಕ್ಕೆ ಬರದಿದ್ದರೆ ನೆಲ ಡೊಂಕು ಎಂಬುದು ಕಾಂಗ್ರೆಸ್​ನ ನೀತಿ ಎಂದು ಶಾಸಕ ಟೆಂಗಿನಕಾಯಿ ವ್ಯಂಗ್ಯವಾಡಿದ್ದಾರೆ.

50 ವರ್ಷಗಳಿಗೂ ಹೆಚ್ಚು ಕಾಲ ದೇಶದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್, ಮತಗಳ ಕಳ್ಳತನ ಮಾಡಿಯೇ ಅಧಿಕಾರಕ್ಕೆ ಏರಿತ್ತಾ ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ನಡೆದಿರುವ ಕಾಂಗ್ರೆಸ್​ನ ಆತಂರಿಕ ಹೋರಾಟವನ್ನು ಮರೆಮಾಚಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ ಎಂದು ದೂರಿದ್ದಾರೆ.

ಬೆಲೆ ಏರಿಕೆ, ರಸಗೊಬ್ಬರ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಅಸಮರ್ಪಕ ಅನುಷ್ಠಾನ ಸೇರಿದಂತೆ ಎಲ್ಲ ರಂಗಗಳಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ಸರ್ಕಾರ ಯಾವಾಗ ಅಧಿಕಾರದಿಂದ ತೊಲಗುತ್ತದೆಯೆಂದು ಜನರು ಕಾಯುತ್ತಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಪ್ರಕಟಣೆ ಮೂಲಕ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net