ಸಚಿವ ಜೋಶಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

9 Dwd 2 - Copy
Published on

ಧಾರವಾಡ: ಕಾಂಗ್ರೆಸ್ ಆಡಳಿತವನ್ನು ತಾಲಿಬಾನ್, ಪಾಕಿಸ್ತಾನ, ಅಪ್ಘಾನಿಸ್ತಾನಕ್ಕೆ ಹೋಲಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜೀನಾಮೆಗೆ ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಽಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸಚಿವ ಜೋಶಿ ಅಸಂವಿಧಾನಿಕ ಪದ ಬಳಕೆಯನ್ನು ವಾಪಸ್ ಪಡೆದು ಕ್ಷಮೆ ಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಸಚಿವ ಸಂತೋಷ ಲಾಡ್ ಮಾತನಾಡಿ, ಸಚಿವ ಜೋಶಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೂಡಲೇ ಅವರನ್ನು ಕೇಂದ್ರ ಸಚಿವ ಸಂಪುಟ ಸ್ಥಾನದಿಂದ ಕೈ ಬಿಡಬೇಕು ಎಂದರು. ಈ ಕುರಿತು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಮೂಲಕ ರಾಷ್ಟçಪತಿಗೆ ಮನವಿ ರವಾನಿಸಿದರು.
ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ಎಂ.ಎಸ್. ಅಕ್ಕಿ, ಬಸವರಾಜ ಗುರಿಕಾರ, ದೀಪಕ ಚಿಂಚೋರೆ, ರಾಬರ್ಟ್ ದದ್ದಾಪುರಿ, ಇಮ್ರಾನ್ ಕಳ್ಳಿಮನಿ, ನಾಗೇಶ ಕಲಬುರ್ಗಿ, ಡಾ. ಲೋಹಿತ್ ನಾಯ್ಕರ್, ಗೌರಮ್ಮ ಬಲೋಗಿ, ದೀಪಾ ಗೌರಿ, ವೆಂಕಟೇಶ ಸಗಬಾಲ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net