

ರಾಮನಗರ : ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ರಾಮನಗರ ಜಿಲ್ಲಾ ಕಾಂಗ್ರೆಸ್ ಸ"ುತಿ ಮತ್ತು ನಗರ ಬ್ಲಾಕ್ ಕಾಂಗ್ರೆಸ್ ಸ"ುತಿ ನೇತೃತ್ವದಲ್ಲಿ ನಗರದ ಐಜೂರು ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ "ರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಕೈನಲ್ಲಿ ಚೊಂಬು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಬಿಡಿಗಾಸು ನೀಡದೆ ಅನ್ಯಾಯ ಮಾಡಿದೆ. ಅಧಿಕಾರದ ಕುರ್ಚಿ ಉಳಿಸಿಕೊಳ್ಳಲು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಿದೆ. ಕರ್ನಾಟಕದ ಬಗ್ಗೆ ಮಲತಾು ಧೋರಣೆ ತೋರಲಾಗಿದೆ ಎಂದು ಕಿಡಿಕಾರಿದರು.
ರಾಜ್ಯದಿಂದ ಚುನಾುತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಹಾಗೂ ಐವರು ಕೇಂದ್ರ ಸಚಿವರು ಕರ್ನಾಟಕ ರಾಜ್ಯಕ್ಕೆ ನಿರೀಕ್ಷಿತ ಅನುದಾನ ತರುವಲ್ಲಿ "ಫಲರಾಗಿದ್ದಾರೆ, ಕರ್ನಾಟಕ ಪ್ರತಿನಿಧಿಸುವ ರಾಜ್ಯಸಭೆ ಸಂಸದೆ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಯಾವುದೇ ನೂತನ ಕೇಂದ್ರೀಯ ಯೋಜನೆ, ನೀರಾವರಿ, ರಸ್ತೆ , ರೈಲ್ವೆ ಯೋಜನೆಗಳಿಗೆ ಅನುದಾನ ನೀಡದೆ ಮಲತಾು ಧೋರಣೆ ಅನುಸರಿಸಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಬಜೆಟ್ ಪೂರ್ವದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಸಮಸ್ಯೆಗೆ ಸ್ಪಂದಿಸಲು ಮನ" ಮಾಡಿದ್ದರು, ಆದರೂ ಸಹ ಭದ್ರಾ ಮೇಲ್ದಂಡೆ, ಮೇಕೆದಾಟು ನೀರಾವರಿ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿಲ್ಲ. ಬಡವರು ಮತ್ತು ರೈತ "ರೋಧಿ ನೀತಿಯನ್ನು ಎನ್ ಡಿಎ ಸರ್ಕಾರ ಅನುಸರಿಸುತ್ತಿದೆ ಎಂದು ದೂರಿದರು.
ಇದೇ ಸಂಧರ್ಭದಲ್ಲಿ ಜಿಲ್ಲೆಯ ಹೆಸರು ಬದಲಾವಣೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ "ನ್ನಲೆಯಲ್ಲಿ ಕಾಂಗ್ರೇಸ್ ಮುಖಂಡರು ಸಿ" ಹಂಚಿ ಸಂತಷ ಪಟ್ಟರು.