ಬಳ್ಳಾರಿ ; ಪ್ರಜಾಪ್ರಭುತ್ವ ಉಳಿವು ಹಾಗೂ ಸಾಮಾನ್ಯರಿಗೆ ಕೇಂದ್ರ ಸರ್ಕಾರದ ವೈಪಲ್ಯತೆಗಳನ್ನು ತಿಳಿಸುವ ಸಲುವಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ. 8 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ್ ವಿಚಾರಕ್ಕೆ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ಪಾಕಿಸ್ತಾನದ ಮೇಲೆ ದೇಶದ ವಾಯುಸೇನೆ ನಡೆಸಿದ ಆಪರೇಷನ್ ಸಿಂಧೂರ ದಲ್ಲಿ ನಮ್ಮ ದೇಶದ ಯಾವುದೇ ಫೈಟರ್ ಜೆಟ್‌ಗಳಿಗೆ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ, ಈ ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ ನಮ್ಮ ಫೈಟರ್ ಜೆಟ್‌ಗಳು ಧ್ವಂಸಗೊಂಡಿದ್ದ ವಿಚಾರವನ್ನು ಇತ್ತೀಚೆಗೆ ಸಿಂಗಾಪುರನಲ್ಲಿ ನಮ್ಮ ವಾಯು ಸೇನೆಯ ಮುಖ್ಯಸ್ಥರು ಬಹಿರಂಗಪಡಿಸುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಒಟ್ಟಾರೆ ಹಲವು ಕೇಂದ್ರ ಹಲವು ವೈಪಲ್ಯ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.