ಸಿಲಿಂಡರ್ ದರ ಏರಿಕೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

congress protest
Published on

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಏರಿಕೆ ಮಾಡಿರುವುದನ್ನು ವಿರೋಧಿಸಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ದರವನ್ನು 50 ರೂ ಏರಿಕೆ ಮಾಡಿದೆ. ಪೆಟ್ರೋಲ್, ಡಿಸೇಲ್ ಅಬಕಾರಿವನ್ನು ಸಹ ಹೆಚ್ಚಳ ಮಾಡಿ ಜನತೆಗೆ ದ್ರೋಹ ಎಸಗಿದ್ದಾರೆ.

ರಾಜ್ಯ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದೆ. ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಏರಿಸುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಮಂಗಳಾರತಿ ಎತ್ತಿದೆ. ರೈತರಿಗೆ ನೆರವಾಗುವ ದೃಷ್ಟಿಯಿಂದ ರಾಜ್ಯ ಸರ್ಕಾರ ಹಾಲಿನ ದರ ಏರಿಸಿ ನೇರವಾಗಿ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ. ಅದನ್ನು ಸಹಿಸದ ಬಿಜೆಪಿ ಹಾಲಿನ ದರ ಏರಿಕೆಯನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ನೀಡಿರುವ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ಮರೆಮಾಚಲು ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದರು, ಗ್ಯಾಸ್ ಬೆಲೆ ಹಾಗೂ ತೈಲೋತ್ಪನ್ನಗಳ ಮೇಲೆ ಸುಂಕ ಏರಿಸಿರುವುದು ಮೋದಿಗೆ ಜನತೆಯ ಮೇಲಿರುವ ಕಪಟ ಪ್ರೀತಿಯನ್ನು ತೋರಿಸುತ್ತದೆ. ಇದನ್ನು ಅರ್ಥ ಮಾಡಿಕೊಂಡು ಬಿಜೆಪಿ ನಾಯಕರು ಈ ನಾಟಕೀಯ ಜನಾಕ್ರೋಶ ಸಮಾವೇಶವನ್ನು ಕೈಬಿಡಬೇಕು. ಬದಲಾಗಿ ಕೇಂದ್ರ ಬಿಜೆಪಿ ಸರ್ಕಾರದ ಮುಂದೆ ಜನರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿ ಜನರಿಗೆ ನೆರವಾಗಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಸೋಮಮಶೇಖರ್, ಶ್ರೀಧರ್, ರವಿಶಂಕರ್, ವಿಜಯ್ ಕುಮಾರ್, ವಿನಯ್ ಕುಮಾರ್, ವಿಶ್ವನಾಥ್, ಟಿ.ಬಿ.ಚಿಕ್ಕಣ್ಣ, ಭವ್ಯ, ಇಂದಿರಾ, ಗುಣಶೇಖರ್, ಮಹ್ಮದ್ ಫಾರೂಖ್, ಜೋಗಿ ಮಹೇಶ್, ಪುಟ್ಟ, ಮಂಜುನಾಥ್ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net