

ಪುತ್ತೂರು ಗ್ರಾಮಾಂತರ: ಸ್ವಾತಂತ್ರ್ಯ ಬಳಿಕ ದೇಶದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದೆ. ಗ್ರಾಮಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ, ಅಂಗನವಾಡಿ, ರೇಶನ್ ವ್ಯವಸ್ಥೆ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಿದೆ. ಕಳೆದ ಹತ್ತು ವರ್ಷಗಳಿಂದ ಬಿಜೆಪಿಗರು ಏನು ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಡಿಸೋಜ ಪ್ರಶ್ನಿಸಿದರು.
ನಿಡ್ಪಳ್ಳಿ ಗ್ರಾ.ಪಂ. ಕಚೇರಿ ಮುಂಭಾಗ ಮಂಗಳವಾರ ನಡೆದ ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ರಾಜ್ಯ ಯುವಕ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ನಿಡ್ಪಳ್ಳಿ ವಲಯ ಕಾಂಗ್ರೆಸ್ ಉಸ್ತುವಾರಿ ಪಿ.ಜಿ.ಶಂಕರನಾರಾಯಣ ಭಟ್, ಗ್ಯಾರಂಟಿ ಸಮಿತಿ ಸದಸ್ಯ ಸಂತೋಷ್ ಭಂಡಾರಿ ಚಿಲ್ಮೆತ್ತಾರು ಮಾತನಾಡಿದರು.
ವಲಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕೋಟ್ಯಾನ್, ಗ್ಯಾರಂಟಿ ಸಮಿತಿಯ ವಿಶ್ವಜಿತ್ ಅಮ್ಮುಂಜೆ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರೂನ್ ಸಿಕ್ವೆರಾ, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ನರಿಮೊಗರು, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ, ಬ್ಲಾಕ್ ಎಸ್.ಟಿ. ಘಟಕದ ಮಾಜಿ ಅಧ್ಯಕ್ಷ ಮಹಾಲಿಂಗ ನಾಯ್ಕ, ಸತೀಶ್ ರೈ ನಿಡ್ಪಳ್ಳಿ, ಗ್ರಾ.ಪಂ. ಸದಸ್ಯರಾದ ಸತೀಶ್ ರೈ ನೆಲ್ಲಿಕಟ್ಟೆ, ಅವಿನಾಶ್ ರೈ ಕುಡ್ಚಿಲ ಮತ್ತಿತರರಿದ್ದರು.