

ಮಂಡ್ಯ: ಜೆಡಿಎಸ್ ಮತ್ತು ಬಿಜೆಪಿಯ ದುರಾಡಳಿತದಿಂದ ಬೇಸತ್ತಿರುವ ಜನರು ಕಾಂಗ್ರೆಸ್‌ನತ್ತ ಒಲವು ತೋರುತ್ತಿದ್ದಾರೆ. ಅಂತೆಯೇ ಈ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಹಕಾರ ನೀಡಲಿದ್ದಾರೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಮುಖಂಡ ರವಿಕುಮಾರ್‌ಗೌಡ ಗಣಿಗ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ವಿ.ವಿ ನಗರದ ವಿವಿಧ ಬಡಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಹಿಗಳಿರುವ ಕಾಂಗ್ರೆಸ್‌ನ ಭರವಸೆಗಳ ಗ್ಯಾರಂಟಿ ಕಾರ್ಡ್‌ಗಳನ್ನು ಜನರಿಗೆ ವಿತರಿಸಿ ಮಾತನಾಡಿದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿತ್ತು. ಅದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿತ್ತು ಎಂದರು. ಮನ್‌ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ನಗರಸಭೆ ಮಾಜಿ ಸದಸ್ಯ ರವೀಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಪ್ಪ, ನಾಗಮಣಿ ಇತರರಿದ್ದರು.
ಇನ್ನು ಬಸರಾಳು ಗ್ರಾಮದಲ್ಲಿ ಪ್ರತಿ ಮನೆಗೆ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪ್ರತಿ ಕುಟುಂಬದ ಒಬ್ಬ ಮಹಿಳೆ ಮಾಸಿಕ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆ, ಕುಟುಂಬದ ಪ್ರತಿ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ ನೀಡುವ ಗ್ಯಾರಂಟಿ ಕಾರ್ಡ್ ಅನ್ನು ಮನೆ ಮನೆಗೆ ವಿತರಿಸಲಾಯಿತು. ಸತೀಶ್‌ಗೌಡ, ಶಂಕರ್, ಪಟೇಲ್ ಲಿಂಗರಾಜು, ಸುನೀಲ, ರಾಮು, ಶ್ರೀನಿವಾಸ್, ಪ್ರಶಾಂತ್, ದಿನೇಶ್, ಕಿರಣ್, ಜಾನಿ, ಪುಟ್ಟಸ್ವಾಮಿ, ಕೆಂಚನಹಳ್ಳಿ ರಾಜು, ಉಮೇಶ್, ಯೋಗೇಶ್ ಇತರರಿದ್ದರು.