ನಗರದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ: ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಣೆ

1 (1)
Published on

ಮಂಡ್ಯ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಟಾಕಿ ಸಿಡಿಸಿ ಮತ್ತು ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಚ್.ನಾಗರಾಜು ಮಾತನಾಡಿ, ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ನಮ್ಮ ನಾಯಕರಾಗಿದ್ದು, ಇಬ್ಬರು ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್. ಸುರೇಶ್, ಎನ್.ದೊಡ್ಡಯ್ಯ, ಎಲ್.ಸಂದೇಶ್, ಬಿ.ಲಿಂಗಯ್ಯ, ರಾಜಣ್ಣ, ವಿಜಯಲಕ್ಷ್ಮೀ ರಘುನಂದನ್, ಶ್ರೀನಿವಾಸ್, ಸಾತನೂರು ರಾಜು, ಮಹೇಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net