ಕಾಂಗ್ರೆಸ್ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ

protest
ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯಿತಿ ಎದುರು ನಡೆಯಿತು.
Published on

ಕುಂದಾಪುರ: ಅಕ್ರಮ-ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ, 9/11 ಸಮಸ್ಯೆ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ಧತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ವಾಡುತ್ತಿರುವ ಅಪಪ್ರಚಾರದ ವಿರುದ್ಧ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ‘ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ’ ಪ್ರತಿಭಟನಾ ಸಪ್ತಾಹ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ನೇತೃತ್ವದಲ್ಲಿ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯಿತಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.

ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಪೂಜಾರಿ, ಮಾಜಿ ಸದಸ್ಯ ಸೀತಾರಾಮ ಶೆಟ್ಟಿ ಮಾತನಾಡಿದರು.

ಗ್ರಾಪಂ ಸದಸ್ಯರಾದ ಶಾಂತಾ ಎ.ಎನ್., ದಿನೇಶ ಮೊಗವೀರ, ಉದಯ ಯಡಾಡಿ, ದೀಪಾ, ವಾಜಿ ಸದಸ್ಯರಾದ ಆನಂದ ಮೊಗವೀರ ನಾಲ್ತೂರು, ಮಂಜು ಸುಣ್ಣಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರದೀಪ ಶೆಟ್ಟಿ ಕಾಳಾವರ, ಉಮೇಶ ಶೆಟ್ಟಿ ಕೇಸನಮಕ್ಕಿ, ಪ್ರವೇಶ ಶೆಟ್ಟಿ, ಗೋವಿಂದ ಶೆಟ್ಟಿ, ಗಣಪಣ್ಣ ಯಡಾಡಿ, ಗಣೇಶ ಯಡಾಡಿ, ಕರುಣಾಕರ ಶೆಟ್ಟಿ ಹೊಂಬಾಡಿ, ಮಹೇಶ ಪೂಜಾರಿ, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net