ಸವದಿ ಕಾಂಗ್ರೆಸ್ ತೊರೆಯುವುದಿಲ್ಲ

HKP NEW
Published on

ಹುಬ್ಬಳ್ಳಿ : ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ವಾಪಸ್ಸು ಹೋಗುವುದಿಲ್ಲವೆಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರಿಗೆ ಸವದಿ ಅವರ ಮೇಲೆ ವಿಶ್ವಾಸ ಇದೆ. ಅವರು ಕಾಂಗ್ರೆಸ್​ನಲ್ಲಿಯೇ ಮುಂದುವರೆಯುತ್ತಾರೆ. ಆದರೆ, ಜಗದೀಶ ಶೆಟ್ಟರ್ ಬಿಜೆಪಿಗೆ ಮರಳಿರುವುದು ಬೇಸರ ಮೂಡಿಸಿದೆ ಎಂದರು.

ಮಂಡ್ಯದ ಹನುಮಧ್ವಜ ವಿವಾದದ ಕುರಿತು ಪ್ರತಿಕ್ರಿಯಿಸಿದ ಸಚಿವ ಎಚ್.ಕೆ. ಪಾಟೀಲ, ಬಿಜೆಪಿ ನಾಯಕರು ಅಧಿಕಾರವಿಲ್ಲದೇ ಹತಾಶೆಗೊಂಡಿದ್ದಾರೆ. ಹೀಗಾಗಿ, ಜನರ ಭಾವನಾತ್ಮಕ ವಿಚಾರಗಳ ಜತೆಗೆ ಆಟವಾಡುತ್ತಿದ್ದಾರೆ. ಅವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಹಿಸಲಾಗುತ್ತಿಲ್ಲ. ಹೇಗಾದರೂ ಮಾಡಿ ಜನರ ಗಮನದಿಂದ ಯೋಜನೆಗಳನ್ನು ದೂರ ಮಾಡಬೇಕೆಂಬ ಉದ್ದೇಶದಿಂದ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ತತ್ವ, ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟು, ಬಿಜೆಪಿಯೊಂದಿಗೆ ಸೇರಿಕೊಂಡು ಪ್ರತಿಭಟನೆ ಮಾಡುತ್ತಿರುವುದು ದುರಾದೃಷ್ಟಕರ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net