

ಶಿವಮೊಗ್ಗ: ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಒಟ್ಟಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ್ನು ಮರು ಸಂಘಟಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ಯ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ, ನಂಬಿದವರನ್ನು ಎಂದೂ ಕಾಂಗ್ರೆಸ್ ಕೈ ಬಿಡುವುದಿಲ್ಲ ಎಂದರು.
ಶತಮಾನಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ದೇಶವನ್ನು ಮತ್ತಷ್ಟು ದಶಕಗಳ ಕಾಲ ಸಮಗ್ರವಾಗಿ ಮುನ್ನಡೆಸುವ ಸಂದಿಗ್ಧತೆ ಇದೆ. ಆ ನಿಟ್ಟಿನಲ್ಲಿ ಮುಂದಿನ ತಾಪಂ, ಜಿಪಂ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲೂ ಅಭೂತಪೂರ್ವ ಗೆಲುವು ದಾಖಲಿಸಲು ಹಳ್ಳಿಯಿಂದ ದಿಲ್ಲಿವರೆಗೆ ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಸಂಘಟನೆಗೆ ಒತ್ತು ನೀಡಬೇಕಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮುಖಂಡ ಆರ್.ಎಂ.ಮಂಜುನಾಥಗೌಡ ಮಾತನಾಡಿದರು. ಬಿಜೆಪಿ, ಜೆಡಿಎಸ್‌ನಿಂದ ನೂರಕ್ಕೂ ಅಧಿಕ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಗೊಂಡರು. ಶಾಸಕ ಬಿ.ಕೆ.ಸಂಗಮೇಶ್ವರ, ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಕೆಪಿಸಿಸಿ ವಕ್ತಾರರಾದ ಕೆ.ಬಿ.ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಮುಖಂಡರಾದ ಎಸ್.ಪಿ.ದಿನೇಶ್, ಎನ್.ರಮೇಶ್, ಇಸ್ಮಾಯಿಲ್ ಖಾನ್, ಶ್ರೀನಿವಾಸ್ ಕರಿಯಣ್ಣ, ತೀ.ನ.ಶ್ರೀನಿವಾಸ್, ರವಿಕುಮಾರ್, ಎಚ್.ಸಿ.ಯೋಗೇಶ್, ಸಿ.ಎಸ್.ಚಂದ್ರಭೂಪಾಲ್, ವಿಶ್ವನಾಥ ಕಾಶಿ, ಯಮುನಾ ರಂಗೇಗೌಡ ಇತರರಿದ್ದರು.