ಕಾಂಗ್ರೆಸ್ ಆತ್ಮಾವಲೋಕನ ಸಮಾವೇಶ ಮಾಡಬೇಕಿತ್ತು

indi 20 press
ಇಂಡಿ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಕಿವುಡೆ ಮಾತನಾಡಿದರು.
Published on

ಇಂಡಿ: ಕಾಂಗ್ರೆಸ್ ಸರ್ಕಾರ ತನ್ನ 2 ವರ್ಷದ ಆಡಳಿತದ ಸಾಧನೆ ಬಗ್ಗೆ ಸಮಾವೇಶ ಹಮ್ಮಿಕೊಳ್ಳುವ ಬದಲಿಗೆ ಆತ್ಮಾವಲೋಕನ ಸಮಾವೇಶ ಹಮ್ಮಿಕೊಂಡಿದ್ದರೆ ಚೆನ್ನಾಗಿರುತ್ತಿತ್ತು ಎಂದು ಇಂಡಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಲೇವಡಿ ಮಾಡಿದರು.

ಇಂಡಿ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ದುಡ್ಡು ಹೊಂದಿಸಲು ಬೆಲೆ ಏರಿಕೆ ಮಾಡಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದೇ ಇವರ ಸಾಧನೆ ಎಂದು ಕುಟುಕಿದರು.

ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರವಾಗಿದ್ದು, ಮತದಾರರು ಈ ಸರ್ಕಾರದ ಆಡಳಿತಕ್ಕೆ ಬೇಸತ್ತಿದ್ದಾರೆ. ಕಳೆದ 2 ವರ್ಷಗಳಿಂದಲೂ ಯಾವುದೇ ರಸ್ತೆಗೆ ಒಂದು ಬುಟ್ಟಿ ಮಣ್ಣು ಕೂಡ ಹಾಕಿಲ್ಲ. ಜನಸಾಮಾನ್ಯರು ರಸ್ತೆ ರಿಪೇರಿ ಮಾಡಿಸಬೇಕೆಂದು ಗೋಗರೆದರೂ ಅವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಇನ್ನಿತರ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ದೂರಿದರು.

ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ವಗ್ಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್.ಟಿ. ಅವರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಅನುದಾನ ತನ್ನ ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ದಲಿತ ಸಮುದಾಯಕ್ಕೆ ಘನ ಘೋರ ಅನ್ಯಾಯ ಮಾಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರೊ. ಸಿದ್ದಲಿಂಗ ಹಂಜಗಿ, ಶೀಲವಂತ ಉಮರಾಣಿ, ರವಿ ಬಗಲಿ, ಹಣಮಂತರಾಯಗೌಡ ಪಾಟೀಲ, ಅನೀಲಗೌಡ ಬಿರಾದಾರ ಮಾತನಾಡಿದರು. ದೇವೇಂದ್ರ ಕುಂಬಾರ ಸ್ವಾಗತಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net